Connect with us

    DAKSHINA KANNADA

    ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ,ಆರೋಪಿಗೆ ಜೈಲು ಶಿಕ್ಷೆ ..!

    ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದೆ ಎಂದು ಹುಸಿ ಬೆದರಿಕೆ ಹಾಕಿದ್ದ ಆರೋಪ ಸಾಬೀತಾಗಿದ್ದುಅಪರಾಧಿಗೆ ನ್ಯಾಯಾಲಯ 1 ತಿಂಗಳ ಶಿಕ್ಷೆ ವಿಧಿಸಿದೆ.

    ಮಂಗಳೂರಿನ 6ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಪೂಜಶ್ರೀ ಅವರು ಅಪರಾಧಿಗೆ 1 ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುದ್ರಾಡಿಯ ವಸಂತ ಕೃಷ್ಣ ಶೇರಿಗಾರ ಶಿಕ್ಷೆಗೊಳಗಾದವನು. ಈತ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಬೆದರಿಕೆ ಕರೆ ಮಾಡಿದ್ದ. ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರಕಾರಿ ಅಭಿಯೋಜಕ ಮೋಹನ್‌ ಕುಮಾರ್ ಬಿ. ಹಾಗೂ ಸಹಾಯಕ ಸರಕಾರಿ ಅಭಿಯೋಜಕ ಜನಾರ್ದನ್ ಸರಕಾರದ ಪರ ವಾದ ಮಂಡಿಸಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *