Connect with us

LATEST NEWS

ಉಡುಪಿ – ಶಾರಾದಾ ರೆಸಿಡೆನ್ಸಿ ಸ್ಕೂಲ್ ಗೆ ಬಾಂಬ್ ಬೆದರಿಕೆ ಇಮೇಲ್

ಉಡುಪಿ, ಜನವರಿ 27: ಉಡುಪಿಯ ಶಾರದಾ ರೆಸಿಡೆನ್ಸ್ ಸ್ಕೂಲ್ ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದೆ. ಮೇಲ್​ ಸಂದೇಶ ಕಂಡು ಶಾಲೆಯ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಮೈದಾನದ ಸಮೀಪದ ಖಾಸಗಿ ಶಾಲೆಯ ಇಮೇಲ್ ಗೆ ಬಾಂಬ್ ಸ್ಪೋಟದ ಸಂದೇಶ ಬಂದಿದ್ದು, ಇದನ್ನು ಗಮನಿಸಿದ ಶಾಲೆಯವರು ಕೂಡಲೇ ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸಿ ಮೈದಾನದಲ್ಲಿ ಇರಿಸಿದ್ದಾರೆ.


ಕೂಡಲೆ ಸ್ಥಳಕ್ಕೆ ಧಾವಿಸಿದ ಶ್ವಾನ ದಳ ಶಾಲೆಯ ಮೂಲೆ ಮೂಲೆಯಲ್ಲೂ ಹುಡುಕಾಟ ನಡೆಸಿದ್ದಾರೆ. ಬಾಂಬ್​ ಬೆದರಿಕೆ ಸಂದೇಶ ವಿಚಾರ ತಿಳಿದ ವಿದ್ಯಾರ್ಥಿಗಳ ಪೋಷಕರು ಶಾಲೆಯ ಮುಂಭಾಗ ಜಮಾಯಿಸಿದ್ದಾರೆ. ಇನ್ನು, ಶಾರದಾ ಶಾಲೆಯಲ್ಲಿ ರಾಜ್ಯದ ನಾನಾ ಭಾಗದ ಹಾಗೂ ಅಂತರರಾಜ್ಯದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

Share Information
Continue Reading
Advertisement
1 Comment

1 Comment

    Leave a Reply

    Your email address will not be published. Required fields are marked *