KARNATAKA
ಬೆಂಗಳೂರು: 6 ಶಾಲೆಗಳಲ್ಲಿ ಬಾಂಬ್ ಬೆದರಿಕೆ; ಬಾಂಬ್ ನಿಷ್ಕ್ರಿಯ ದಳದಿಂದ ಶೋಧಕಾರ್ಯ
ಬೆಂಗಳೂರು, ಎಪ್ರಿಲ್ 08: ಬೆಂಗಳೂರಿನ 6 ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯೊಡ್ಡಲಾಗಿದ್ದು, ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಬಾಂಬ್ ಪತ್ತೆಕಾರ್ಯ ಚುರುಕುಗೊಳಿಸಿದೆ.
ಬೆಂಗಳೂರಿನ ಆನೇಕಲ್ ತಾಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಜಾಪುರ ರಸ್ತೆಯಲ್ಲಿರುವ ಡೆಲ್ಲಿ ಪಬ್ಲಿಕ್ ಸ್ಕೂಲ್, ಮಹದೇವಪುರದ ಗೋಪಾಲನ್ ಇಂಟರ್ ನ್ಯಾಷನಲ್ ಸ್ಕೂಲ್, ಮಾರತ್ತಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂಲ್, ಹೆಣ್ಣೂರು ಠಾಣಾ ವ್ಯಾಪ್ತಿಯ ಸೇಂಟ್ ವಿನ್ಸೆಂಟ್ ಪೌಲ್ ಸ್ಕೂಲ್, ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್ ಸೇರಿದಂತೆ ಒಟ್ಟು 6 ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ.
ಮಲಿಂದ ಬೊರೊನ್ ಎಂಬ ಇ-ಮೇಲ್ ಅಕೌಂಟ್ ನಿಂದ ಮೇಲ್ ಬಂದಿದ್ದು, ದಿಸ್ ಇಸ್ ನಾಟ್ ಜೋಕ್, ಶಾಲೆಗಳಲ್ಲಿ ಬಾಂಬ್ ಇಡಲಾಗಿದ್ದು, ಎಲ್ಲವೂ ನಿಮ್ಮ ಕೈಲಿ ಇಲ್ಲ. ನೂರಾರು ಜೀವ ಉಳಿಸಿ ಎಂದು ಬೆದರಿಕೆ ಹಾಕಲಾಗಿದೆ.
ಸ್ಥಳಕ್ಕೆ ದೌಡಾಯಿಸಿರುವ ಶ್ವಾನದಳ, ಬಾಂಬ್ ಪತ್ತೆದಳಗಳು ಶಾಲಾ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳನ್ನು ಬೇರೆಡೆ ಸ್ಥಳಾಂತರಿಸಿ ಶೋಧ ಕಾರ್ಯ ಮುಂದುವರೆಸಿದ್ದಾರೆ.