Connect with us

LATEST NEWS

ಮಂಗಳೂರು ಸೇರಿದಂತೆ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಇಮೇಲ್

ಹುಬ್ಬಳ್ಳಿ ಜೂನ್ 29: ಮಂಗಳೂರು ಸೇರಿದಂತೆ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕ ಇಮೇಲ್ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.


ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ roadkill kyo ಹೆಸರಿನ ಇ-ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದೆ. ತಕ್ಷಣ ಬಾಂಬ್‌ ತಪಾಸಣಾ ದಳ ಮತ್ತು ಭದ್ರತಾ ಸಿಬ್ಬಂದಿ ಜತೆ ಸಭೆ ನಡೆಸಿ, ನಿಲ್ದಾಣಕ್ಕೆ ಬಿಗಿ ಭದ್ರತೆ ಒದಗಿಸಿದ್ದಾರೆ.

ರಾಜ್ಯದ ಹುಬ್ಬಳ್ಳಿ, ಬೆಳಗಾವಿ, ಮಂಗಳೂರು ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಕುರಿತು ಭಾನುವಾರ ಮಧ್ಯಾಹ್ನ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನೆಯಾಗಿದೆ. ವಿಮಾನ ನಿಲ್ದಾಣದ ಆವರಣ ಪ್ರವೇಶಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಮತ್ತು ಸಾರ್ವಜನಿಕರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು, ಆಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *