LATEST NEWS
ಬೊಂಡ ಪ್ಯಾಕ್ಟರಿ ಎಳನೀರು ಕುಡಿದು 137 ಮಂದಿ ಅಸ್ವಸ್ಥ – ಎಳನೀರು ಸೇರಿದಂತೆ ಇತರೆ ಆಹಾರ ಮಾರದಂತೆ ನಿರ್ಬಂಧ

ಮಂಗಳೂರು ಎಪ್ರಿಲ್ 11: ಅಡ್ಯಾರಿನ ಬೊಂಡ ಫ್ಯಾಕ್ಟರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಇಂದು ಜಿಲ್ಲಾ ಅಂಕಿತ ಅಧಿಕಾರಿ ಆಹಾರ ಸುರಕ್ಷತೆ,ಜಿಲ್ಲಾ ಸರ್ವೇಕ್ಷಣಾಧಿಕಾರಿ,ತಾಲ್ಲೂಕು ಆರೋಗ್ಯಾಧಿಕಾರಿ ಮಂಗಳೂರು ಮತ್ತು ತಂಡದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಆದೇಶದವರೆಗೆ ಎಳನೀರು ಮತ್ತು ಇತರೆ ಆಹಾರ ಮಾರಾಟ ಮಾಡದಂತೆ ತಿಳಿಸಿದ್ದಾರೆ.
ಅಡ್ಯಾರಿನ ನ್ಯಾಚುರಲ್ಸ್ ಐಸ್ ಕ್ರೀಂ ಕಂಪೆನಿಯ ಬೊಂಡ ಪ್ಯಾಕ್ಟರಿಯಲ್ಲಿ ಎಳನೀರು ಕುಡಿದು ತುಂಬೆ ಪರಿಸರದ ನಿವಾಸಿಗಳು ಅಸ್ವಸ್ಥರಾದ ಹಿನ್ನಲೆ ಬೊಂಡ ಪ್ಯಾಕ್ಟರಿಗೆ ಜಿಲ್ಲಾ ಅಂಕಿತ ಅಧಿಕಾರಿ ಆಹಾರ ಸುರಕ್ಷತೆ,ಜಿಲ್ಲಾ ಸರ್ವೇಕ್ಷಣಾಧಿಕಾರಿ,ತಾಲ್ಲೂಕು ಆರೋಗ್ಯಾಧಿಕಾರಿ ಮಂಗಳೂರು ಮತ್ತು ತಂಡದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮುಖ್ಯಸ್ಥರೊಂದಿಗೆ ಚರ್ಚಿಸಿ ತಾತ್ಕಾಲಿಕವಾಗಿ ಮತ್ತು ಮತ್ತು ಮುಂದಿನ ಆದೇಶದವರೆಗೆ ಎಳನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ತಿಳುವಳಿಕೆ ನೋಟೀಸ್ ನೀಡಿ ಬಂದ್ ಮಾಡಿಸಲಾಯಿತು. ಆನಂತರ ತುಂಬೆಯಲ್ಲರುವ ಫಾದರ್ ಮುಲ್ಲರ್ ಆಸ್ಪತ್ರೆ, ಬಿ.ಸಿ.ರಸ್ತೆಯ ಪೆರ್ಲಯ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಬಂಟವಾಳ, ಕಲ್ಲಡ್ಕದ ಪುಷ್ಪರಾಜ್ ಆಸ್ಪತ್ರೆ,ಮಂಗಳೂರು ನಗರದ ಹೈಲ್ಯಾಂಡ್ , ಯುನಿಟಿ ,ಕಣಚೂರು,
ಯೆನೆಪೋಯ,ಇಂಡಿಯಾನ,ಕೊಲಾಸೊ ಹಾಗೂ ಇತರೆ ವಿವಿಧ ಆಸ್ಪತ್ರೆಗಳಿಗೆ ತಂಡಗಳಾಗಿ ಭೇಟಿ ನೀಡಿ ಪರಿಶೀಲನೆ ಮಾಡಲಾಯಿತು.

ಇದುವರೆಗೆ 137 ಮಂದಿ ಎಳನೀರು ಕುಡಿದಿರುವುದರಿಂದ ಅಸ್ವಸ್ಥರಾಗಿದ್ದು,ಹೊರರೋಗಿಗಳಾಗಿ 84,ಒಳರೋಗಿಗಳಾಗಿ 53 ಮಂದಿ ಚಿಕಿತ್ಸೆ ಪಡೆದಿದ್ದಾರೆ.ಇದುವರೆಗೆ 23 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿರುತ್ತಾರೆ.ಆಸ್ಪತ್ರೆಯಲ್ಲಿರುವ ಎಲ್ಲರ ಆರೋಗ್ಯವು ಸ್ಥಿರವಾಗಿರುತ್ತದೆ.ಆರೋಗ್ಯ ಇಲಾಖೆಯಿಂದ ನಿರಂತರವಾಗಿ ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿರುತ್ತದೆ.