BELTHANGADI
ಬೆಳ್ತಂಗಡಿ – ಕಾಲುಜಾರಿ ಬಾವಿಗೆ ಬಿದ್ದು ಬಾಲಕ ಸಾವು

ಬೆಳ್ತಂಗಡಿ ಜನವರಿ 15 : ಮಕ್ಕಳ ಜೊತೆ ಆಟವಾಡುತ್ತಿರುವ ವೇಳೆ ತೆರೆದ ಬಾವಿಗೆ ಕಾಲು ಜಾರಿ ಬಿದ್ದು 7 ವರ್ಷ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ನಡೆದಿದೆ.
ಮೃತ ಬಾಲಕನನ್ನು ಪಣಕಜೆ ನಿವಾಸಿ ಮಹಮ್ಮದ ಹನೀಫ್ ಎಂಬವರ ಪುತ್ರ ಮಹಮ್ಮದ್ ಅನಾನ್ (7) ಎಂದು ಗುರುತಿಸಲಾಗಿದೆ. ಇಂದು ಶಾಲೆಗೆ ರಜೆ ಇದ್ದ ಕಾರಣ ಪಕ್ಕದ ಮನೆಯ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ಕಟ್ಟೆ ಇಲ್ಲದ ಬಾವಿಯ ಬಳಿ ಮಕ್ಕಳು ಆಟವಾಡುತ್ತಿದ್ದಾಗ ಬಾಲಕ ಅನಾನ್ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದನೆನ್ನಲಾಗಿದೆ. ಕೂಡಲೇ ಸ್ಥಳೀಯರ ಸಹಕಾರದಲ್ಲಿ ಬಾಲಕನನ್ನು ಮೇಲೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಬಾಲಕ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈತ ಸ್ಥಳೀಯ ಶಾಲೆಯ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಪುಂಜಾಲಕಟ್ಟೆ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
