Connect with us

LATEST NEWS

ಯಾರಿಗೂ ವಂಚನೆ ಮಾಡಿಲ್ಲ – ಐ ವಿಲ್ ಕಮ್ ಬ್ಯಾಕ್ ಅಗೈನ್ – ಬಿ.ಆರ್ ಶೆಟ್ಟಿ

ಉಡುಪಿ ಮಾರ್ಚ್ 1: ಸಂಯುಕ್ತ ಅರಬ್‌ ಸಂಸ್ಥಾನದಲ್ಲಿ ಎನ್‌ಎಂಸಿ ಆರೋಗ್ಯ ಸೇವಾ ಸಂಸ್ಥೆಯ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೂಲದ ಉದ್ಯಮಿ ಬಿ.ಆರ್‌. ಶೆಟ್ಟಿ ಅವರು ವಿಶ್ವದೆಲ್ಲೆಡೆ ಹೊಂದಿರುವ ಆಸ್ತಿ ಮುಟ್ಟುಗೋಲಿಗೆ ಬ್ರಿಟನ್‌ನ ಕೋರ್ಟ್‌ ಆದೇಶ ನೀಡಿದ ನಂತರ ಮೊದಲ ಬಾರಿಗೆ ಬಿ.ಆರ್ ಶೆಟ್ಟಿ ಮಾಧ್ಯಮಗಳ ಮುಂದೆ ಬಂದಿದ್ದು, ಜನರ ಆಶಿರ್ವಾದದಿಂದ ನಾನು ಎಲ್ಲಾ ಸಮಸ್ಯೆಗಳಿಂದ ಹೊರ ಬರುತ್ತೆನೆ ಎಂದು ಹೇಳಿದ್ದಾರೆ.


ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ವ್ಯವಹಾರದಲ್ಲಿ ನಾನು ಕೆಲವು ಜನರನ್ನು ನಂಬಿ ಮೋಸ ಹೋಗಿದ್ದು, ನನ್ನ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಸೇರಿದ ಒಬ್ಬನನ್ನು ನತರ ಸಿ ಎಫ್ ಓ ಮಾಡಿದೆ ಆದರೆ ಅವನೇ ನನ್ನ ಬೆನ್ನಿಗೆ ಚೂರಿ ಹಾಕಿದ್ದ ನನ್ನ ಆರ್ಥಿಕ ಸಂಕಷ್ಟಕ್ಕೆ ಅವನೇ ಕಾರಣ ಎಂದು ಹೇಳಲಾರೆ ಏಕೆಂದರೆ ಆರೋಪ ಇನ್ನೂ ಸಾಬೀತಾಗಿಲ್ಲ. ಸದ್ಯ ಪ್ರಕರಣ ನ್ಯಾಯಾಲಯದಲ್ಲಿದೆ ಹಾಗಾಗಿ ಹೆಚ್ಚೇನು ಹೇಳಲಾರೆ ಎಂದರು.


ನಾನು ಯಾರಿಗೂ ವಂಚನೆ ಮಾಡಿಲ್ಲ ಎಂಬ ಆತ್ಮವಿಶ್ವಾಸವಿದೆ. ನಾನು ಉಡುಪಿಯಲ್ಲಿದ್ದಾಗ ನನ್ನ ಕಿಸೆಯಲ್ಲಿ ಒಂದು ರೂಪಾಯಿ ದುಡ್ಡು ಇರುತ್ತಿರಲಿಲ್ಲ, ಸಾಲಮಾಡಿ ಬೈಕಿಗೆ ಪೆಟ್ರೋಲ್ ಹಾಕಿ ಓಡಾಡುತ್ತಿದ್ದೆ, ಯಾರಿಂದ ಸಾಲ ಪಡೆದಿದ್ದೇನೆ ಎಲ್ಲವನ್ನೂ ವಾಪಾಸು ಮಾಡಿದ್ದೇನೆ ಐ ವಿಲ್ ಕಮ್ ಬ್ಯಾಕ್ ಅಗೈನ್. ನಾನು ಕಷ್ಟಪಟ್ಟು ದುಡಿದ ಹಣವನ್ನು ಮರು ಗಳಿಸುತ್ತೇನೆ ನನ್ನ ಟ್ರಸ್ಟ್ ಮೂಲಕ ನಡೆಯುತ್ತಿರುವ ಎಲ್ಲಾ ಉಚಿತ ಸಮಾಜ ಸೇವೆಗಳನ್ನು ಮುಂದುವರಿಸುತ್ತೇನೆ. ನನ್ನ ಆಸ್ತಿಯ ಅರ್ಧಭಾಗವನ್ನು ಮಿಲಿಂದಾ ಗೇಟ್ ಫೌಂಡೇಶನ್ ಗೆ ದಾನ ಮಾಡಿದ್ದೇನೆ. ಪಾರ್ಕಿನ್ಸನ್ ಅಮ್ನೇಶಿಯಾ ಮೊದಲಾದ ಕಾಯಿಲೆಗಳ ಬಗ್ಗೆ ಈ ಸಂಸ್ಥೆ ಅಧ್ಯಯನ ನಡೆಸುತ್ತಿದೆ.

ಈಗ ನನಗೆ ಗ್ರಹಚಾರ ಬಂದಿದೆ ಏನು ಮಾಡಲು ಸಾಧ್ಯ ? ಬಿಆರ್ ಶೆಟ್ಟಿ ಸಾಮ್ರಾಜ್ಯ ಮುಳುಗಿಹೋಯಿತು ಎಂಬ ಸುದ್ದಿಗಳನ್ನು ನೋಡಿ ಬೇಸತ್ತು ಹೋಗಿದ್ದೇನೆ. ದೇವರ ದಯೆಯಿಂದ ನನ್ನ ಆರ್ಥಿಕ ಪರಿಸ್ಥಿತಿ ಅಷ್ಟೇನೂ ಹದಗೆಟ್ಟಿಲ್ಲ. ನೀವು ಯಾರು ಊಹಿಸಿರದಷ್ಟು ಬಿ ಆರ್ ಶೆಟ್ಟಿ ಆರ್ಥಿಕವಾಗಿ ಸಕ್ಷಮ ವಾಗಿದ್ದಾರೆ. ಹೊರದೇಶದಲ್ಲಿರುವ ನನ್ನ ಸಾಮ್ರಾಜ್ಯ ಹೋಗಿರಬಹುದು. ಆದರೆ ಭಾರತದ ಆಸ್ತಿ ಸುರಕ್ಷಿತವಾಗಿದೆ ಎಂದರು. ಇನ್ನು ಪ್ರಧಾನಿ ನರೇಂದ್ರ ಮೋದಿ ನನಗೆ ಆತ್ಮೀಯರು ಆದರೆ ಅವರಿಂದ ನೆರವು ಯಾಚಿಸಿಲ್ಲ, ನಾನು ಪ್ರಧಾನಿ ಅವರ ಜೊತೆ ಮಾತನಾಡಲು ಹೋದರೆ ರಾಹುಲ್ ಗಾಂಧಿಗೆ ಮಾತನಾಡಲು ವಿಷಯ ಸಿಗುತ್ತದೆ. ನೀರವ್ ಮೋದಿ ವಿಜಯ್ ಮಲ್ಯ ಆಯ್ತು ಈಗ ಬಿಆರ್ ಶೆಟ್ಟಿಯೂ ದಿವಾಳಿ ಎನ್ನಬಹುದು, ಸದ್ಯ ನಾನು ಯಾವ ಬಿಜೆಪಿಯ ಮುಖಂಡರನ್ನು ನಾನು ಮಾತನಾಡಿಸಲು ಹೋಗಿಲ್ಲ.
2012ರಲ್ಲಿ ನನಗೆ 12.8 ಬಿಲಿಯನ್ ಡಾಲರ್ ಮಾರ್ಕೆಟ್ ಕ್ಯಾಪಿಟಲ್ ಇತ್ತು 2017ರಿಂದ ನಾನು ನ್ಯೂ ಮೆಡಿಕಲ್ ಸಂಸ್ಥೆಯಿಂದ ಹೊರ ಬಂದೆ ನಂತರ 2019ರಲ್ಲಿ ನನ್ನ ಎಲ್ಲಾ ಸಾಮ್ರಾಜ್ಯ ಕುಸಿದು ಹೋಯಿತು. ಲಕ್ಷ್ಮೀ ಚಂಚಲೆ ಏನೂ ಮಾಡಲು ಸಾಧ್ಯವಿಲ್ಲ ಸರಸ್ವತಿ ಮಾತ್ರ ಸ್ಥಿರವಾಗಿ ಇರುತ್ತಾಳೆ ಎಂದರು.


ಇನ್ನು ಮಾಧ್ಯಮಗಳಲ್ಲಿ ಬಿ.ಆರ್ ಶೆಟ್ಟಿಯವರ ಕಣ್ಣೀರು ಸುರಿಸುತ್ತಿರುವ ಪೋಟೋ ಕುರಿತಂತೆ ಪ್ರತಿಕ್ರಿಯಿಸಿದ ಅವರು ನಾನು ಯಾವತ್ತೋ ಆನಂದಬಾಷ್ಪ ಸುರಿಸಿದ ಚಿತ್ರವನ್ನು ಮಾಧ್ಯಮಗಳು ಕಣ್ಣೀರು ಎಂದು ಬಿಂಬಿಸಿದವು ಎಂದು ಆರೋಪಿಸಿದ ಅವರು,.. ಶೆಟ್ಟಿಯ ಸಾಮ್ರಾಜ್ಯ ಉರುಳಿ ಬಿದ್ದಿದೆ ಎಂದು ಅವರು ಕೂಡ ಪತ್ರಿಕೆಗಳಲ್ಲಿ ಬಂದಿದೆ. ಆದರೆ ನನ್ನ ಮುಂದೆ ಎಂಬತ್ತನಾಲ್ಕು ಬ್ಯಾಂಕುಗಳು ಸಾಲ ಕೊಡಲು ಕ್ಯೂ ನಿಂತಿದ್ದವು, ಈಗ ಏನೇನೋ ಮಾತನಾಡುತ್ತಿದ್ದಾರೆ. ಆದರೂ ನಾನು ಧೃತಿಗೆಡುವುದಿಲ್ಲ ಮತ್ತೆ ಎದ್ದು ಬರುತ್ತೇನೆ ಎಂದರು

Share Information
Continue Reading
Advertisement
Click to comment

Leave a Reply

Your email address will not be published. Required fields are marked *