ಬ್ರಹ್ಮಾವರ ಸೆಪ್ಟೆಂಬರ್ 12: ಮದುವೆಯಾಗಲು ನಿರಾಕರಿಸಿದ್ದಳೆಂಬ ಕಾರಣಕ್ಕೆ ಯುವಕನಿಂದ ಚೂರಿ ಇರಿತಕ್ಕೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದರೆ. ಯುವತಿಗೆ ಚೂರಿ ಇರಿದ ಆರೋಪಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮದುವೆ ನಿರಾಕರಿಸಿದ ಕಾರಣಕ್ಕಾಗಿ ಆರೋಪಿ ಕೊಕ್ಕರ್ಣೆ ಚೆಗರಿಬೆಟ್ಟು ನಿವಾಸಿ ಕಾರ್ತಿಕ್ ಪೂಜಾರಿ, ತನ್ನ ನೆರೆಮನೆಯ ರಕ್ಷಿತಾ ಪೂಜಾರಿ (24) ಎಂಬಾಕೆಯನ್ನು ಚೂರಿಯಿಂದ ಕುತ್ತಿಗೆ ಹಾಗೂ ಎದೆಯ ಭಾಗಕ್ಕೆ ಇರಿದು ಪರಾರಿಯಾಗಿದ್ದನು. ಇದರಿಂದ ಗಂಭೀರವಾಗಿ ಗಾಯಗೊಂಡ ರಕ್ಷಿತಾ ಅವರನ್ನು ಮಣಿಪಾಲ ಆಸ್ಪತ್ರೆ ದಾಖಲಿಸಲಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಅಕ್ಷತಾ ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ಇನ್ನು ಕೊಲೆ ಆರೋಪಿ ಕಾರ್ತಿಕ್ ಪೂಜಾರಿಯ ಮೃತದೇಹ ಅಲ್ಲೇ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈತ ಕೊಲೆ ಮಾಡಿದ ಬಳಿಕ ಪರಾರಿಯಾಗಿ ಅಲ್ಲೇ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.
ಪ್ರೀತಿಯ ವಿಚಾರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿಯು ರಕ್ಷಿತಾಳನ್ನು ಮದುವೆಯಾಗುವ ಇಚ್ಛೆ ವ್ಯಕ್ತಪಡಿಸಿದ್ದ. ಆದರೆ ಆಕೆಯ ಮನೆಯವರು ನಿರಾಕರಿಸಿದ್ದರು. ರಕ್ಷಿತಾ ಕೂಡಾ ಆತನನ್ನು ಬ್ಲಾಕ್ ಮಾಡಿದ್ದಳು.ಇದರಿಂದ ಕುಪಿತಗೊಂಡಿದ್ದ ಕಾರ್ತಿಕ್, ರಕ್ಷಿತಾ ಇಂದು ಬೆಳಗ್ಗೆ ಕೆಲಸಕ್ಕೆಂದು ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದಾಗ ಬಂದು ಚಾಕುವಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ. ಆಕೆಯ ಹುಟ್ಟಿದ ದಿನದಂದೇ ಆಕೆಯ ಕುತ್ತಿಗೆ ಮತ್ತು ಎದೆಗೆ ಚಾಕುವಿನಿಂದ ಇರಿದಿದ್ದ. ಕುತ್ತಿಗೆ ಮತ್ತು ಎದೆಯ ಸುತ್ತ ಬಲ ಮತ್ತು ಎಡ ಪಕ್ಕೆಲುಬಿನ ಪ್ರದೇಶದಲ್ಲಿ ತೀವ್ರ ಇರಿತದ ಗಾಯವಾಗಿತ್ತು. ಅಲ್ಲೆ ಕುಸಿದು ಬಿದ್ದಿದ್ದ ಆಕೆಯನ್ನು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಚಿಕಿತ್ಸೆ ಕೊನೆಯುಸಿರೆಳೆದಿದ್ದಾಳೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.