LATEST NEWS
Brahmavara : ಬೈಕ್ ನಿಂದ ಬಿದ್ದು ಮಹಿಳೆ ಸಾವು….!!

ಬ್ರಹ್ಮಾವರ ಜುಲೈ 16 : ಬೈಕ್ ನಿಂದ ಬಿದ್ದು ಹಿಂಬದಿ ಸವಾರೆಯೊಬ್ಬರು ಸಾವನಪ್ಪಿರುವ ಘಟನೆ ಹೆಬ್ರಿ- ಬ್ರಹ್ಮಾವರ ರಸ್ತೆಯ ಕೊಳಂಬೆ ಎಂಬಲ್ಲಿ ನಿನ್ನೆ ನಡೆದಿದೆ.
ಮೃತರನ್ನು ಕೋಟೇಶ್ವರ ನಿವಾಸಿ, ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಲೈಬ್ರೆರಿಯನ್ ಶಾಂಭವಿ ಪಿ.(59) ಎಂದು ಗುರುತಿಸಲಾಗಿದೆ. ಕಾಲೇಜು ಬಿಟ್ಟ ನಂತರ ಇವರು ಕಾಲೇಜಿನ ಲ್ಯಾಬ್ ಟೆಕ್ನಿಷಿಯನ್ ಸುಧೀಂದ್ರ ಎಂಬವರ ಬೈಕಿ ನಲ್ಲಿ ಬ್ರಹ್ಮಾವರದವರೆಗೆ ಹೊರಟಿದ್ದರು. ದಾರಿ ಮಧ್ಯೆ ಇವರು ಬೈಕಿನಿಂದ ಆಯತಪ್ಪಿ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇವರು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
