UDUPI
ಬ್ರಹ್ಮಾವರ: ಜನ ಔಷಧಿ, ಮಹಿಳಾ ದಿನಾಚರಣೆ
ಉಡುಪಿ, ಮಾರ್ಚ್ 8 : ಸಮುದಾಯ ಆರೋಗ್ಯ ಕೇಂದ್ರ, ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ಹಾಗೂ ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಇವರ ಸಹಯೋಗದೊಂದಿಗೆ ಬ್ರಹ್ಮಾವರದ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದಲ್ಲಿ ಜನ ಔಷಧಿ ದಿವಸ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ ಮೂರ್ತಿ ಮಾತನಾಡಿ, ಜನ ಔಷಧಿಯು ಬಡ ಮತ್ತು ಮಧ್ಯಮ ವರ್ಗದ ರೋಗಿಗಳಿಗೆ ವರದಾನವಾಗಿದ್ದು, ಶೇ. 50-90 ರ ವರೆಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ಔಷಧಿಗಳನ್ನು ಸಾರ್ವಜನಿಕರಿಗೆ ನೀಡಿ ಜನ ಔಷಧಿ ಕೇಂದ್ರಗಳು ಬಹುಜನೋಪಯೋಗಿಯಾಗಿ ಹೊರ ಹೊಮ್ಮಿದೆ. ತಳ ಮಟ್ಟದ ಜನರಿಗೂ ಈ ಯೋಜನೆಯ ಕುರಿತು ಅರಿವು ಮೂಡಿಸುವಲ್ಲಿ ಆಶಾ ಕಾರ್ಯಕರ್ತೆ ಮತ್ತು ವಿದ್ಯಾರ್ಥಿಗಳ ಪಾತ್ರ ಮಹತ್ತರವಾಗಿದೆ ಎಂದರು. ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಹೇಶ್ ಐತಾಳ್, ಜನ ಔಷಧಿ ಬಗ್ಗೆ ಮಾಹಿತಿ ನೀಡಿದರು.