LATEST NEWS
ಬ್ರಹ್ಮಾವರ ಲಾಕಪ್ ಡೆತ್ – ಕೇರಳ ಸಿಎಂ ಅಂಗಳಕ್ಕೆ ಪ್ರಕರಣ
ಬ್ರಹ್ಮಾವರ ನವೆಂಬರ್ 26: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತ ಬಿಜು ಮೋನು ಕುಟುಂಬ ಕೇರಳ ಸಿಎಂ ಅವರಿಗೆ ಪತ್ರ ಬರೆದು ಸಮಗ್ರ ತನಿಖೆಗೆ ಒತ್ತಾಯಿಸಿದೆ.
ನವೆಂಬರ್ 9 ರಂದು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣದಲ್ಲಿ ಕೇರಳ ಮೂಲದ ಬಿಜು ಮೋನು ಮೃತಪಟ್ಟಿದ್ದ. ಮದ್ಯಪಾನ ಮಾಡಿ ಮಹಿಳೆಗೆ ಕಿರುಕುಳ ಕೊಟ್ಟ ಆರೋಪಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಕುಸಿದುಬಿದ್ದು ಸಾವು ಎಂದು ಆರಂಭದಲ್ಲಿ ಭಾವಿಸಲಾಗಿತ್ತು. ಮರಣೋತ್ತರ ಪರೀಕ್ಷೆಯ ವರದಿ ಬರುವ ಮೊದಲೇ ಕುಟುಂಬ ಗಂಭೀರ ಆರೋಪ ಮಾಡಿದೆ. ಆರೋಪಿ ಮೈ ಮೇಲೆ ಪೊಲೀಸ್ ಏಟಿನ ಗಂಭೀರ ಗಾಯಗಳ ಗುರುತು ಇತ್ತು. ಲಾಠಿ ಮತ್ತು ಶೂಗಳಿಂದ ಹಲ್ಲೆ ಮಾಡಲಾಗಿತ್ತು ಎಂಬ ಅರ್ಥದಲ್ಲಿ ಕುಟುಂಬ ದೂರಿದೆ.
ಮೊಣಕಾಲಿನ ಕೆಳಗೆ ಲಾಠಿ ಏಟಿನ ರೀತಿಯ ಗಾಯದ ಗುರುತು ಇದೆ. ಲಾಕಪ್ ಡೆತ್ ಪ್ರಕರಣವನ್ನು ಅಸಹಜ ಸಾವು ಎಂದು ಪೊಲೀಸರು ಬಿಂಬಿಸಲು ಪ್ರಯತ್ನ ಪಟ್ಟಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸರ ವಿರುದ್ಧ ಬಿಜು ಮೋನು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದು ಮಾತ್ರವಲ್ಲ, ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಈ ಬಗ್ಗೆ ತನಿಖೆ ಮಾಡುವಂತೆ ಒತ್ತಾಯಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಸರಕಾರ ಮಧ್ಯಪ್ರವೇಶ ಮಾಡಿದರೆ ಬ್ರಹ್ಮಾವರ ಪೊಲೀಸರಿಗೆ ಮತ್ತಷ್ಟು ತಲೆನೋವಾಗಲಿದೆ.
1 Comment