Connect with us

    LATEST NEWS

    ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಕೇರಳ ಮೂಲದ ವ್ಯಕ್ತಿಯ ಲಾಕಪ್ ಡೆತ್ ಪ್ರಕರಣ ಸಿಐಡಿ ತನಿಖೆ – ಎಸ್ಪಿ ಡಾ.ಕೆ.ಅರುಣ್

    ಉಡುಪಿ ನವೆಂಬರ್ 10: ಮಹಿಳೆಯನ್ನು ಚುಡಾಯಿಸಿದ ಆರೋಪದ ಮೇಲೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಠಾಣೆಯಲ್ಲಿ ಸಾವನಪ್ಪಿದ ಘಟನೆ ನಡೆದಿದ್ದು, ಇದೀಗ ಈ ಪ್ರಕರಣವನ್ನು ಸಿಐಡಿ ತನಿಖೆ ನಡೆಸಲಿದೆ ಎಂದು ಉಡುಪಿ ಎಸ್ಪಿ ಡಾ. ಕೆ ಅರುಣ್ ತಿಳಿಸಿದ್ದಾರೆ.


    ಮೃತ ಆರೋಪಿಯನ್ನು ಕೇರಳದ ಕೊಲ್ಲಂ ಮೂಲದ ಬಿಜು ಮೋಹನ್(42 ಗುರುತಿಸಲಾಗಿದೆ. ಇವರು ಹಂಗಾರಕಟ್ಟೆ ಮೀನು ಫ್ಯಾಕ್ಟರಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಮೂರು ದಿನಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿಕೊಂಡಿ ದ್ದನು. ಸೂರಬೆಟ್ಟು ಎಂಬಲ್ಲಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಬೀಜು ಮೋಹನ್, ನವೆಂಬರ್ 9ರಂದು ರಾತ್ರಿ ವೇಳೆ ಅಲ್ಲೇ ಸಮೀಪದ ಮನೆಯಲ್ಲಿ ವಾಸವಾಗಿದ್ದ ಮಹಿಳೆಗೆ ಚುಡಾಯಿಸಿದ್ದ ಎಂದು ಆರೋಪಿಸಲಾಗಿದೆ. ಆ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು, ಸ್ಥಳೀಯರು ಜಮಾಯಿಸಿ ಬೀಜು ಮೋಹನ್‌ನನ್ನು ಹಿಡಿದು ಮನೆಯೊಳಗೆ ಕೂಡಿ ಹಾಕಿದರು. ಬಳಿಕ ಪೊಲೀಸರುಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು, ಠಾಣೆಗೆ ಕರೆದುಕೊಂಡು ಬಂದಿದ್ದರು ಎಂದು ತಿಳಿದುಬಂದಿದೆ. ಮದ್ಯ ಸೇವಿಸಿದ್ದ ಬೀಜು ಮೋಹನ್‌ನನ್ನು ಸೆಲ್‌ನಲ್ಲಿ ಇರಿಸಿದ್ದು, ನಸುಕಿನ ವೇಳೆ 3.30ರ ಸುಮಾರಿಗೆ ಆತ ಸಮೀಪದ ಬಾತ್‌ರೂಮಿನಲ್ಲಿ ಕುಸಿದು ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಪೊಲೀಸರು ಆತನನ್ನು ಬ್ರಹ್ಮಾವರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದು, ಪರೀಕ್ಷಿಸಿದ ಪೊಲೀಸರು ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.


    ಇನ್ನು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಕೇರಳ ಮೂಲದ ವ್ಯಕ್ತಿಯ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಮೃತರ ಮನೆಯವರಿಗೆ ಮಾಹಿತಿ ನೀಡಲಾಗಿದೆ. ಕೇರಳದಿಂದ ಆಗಮಿಸುತ್ತಿರುವ ಮೃತರ ಕುಟುಂಬಸ್ಥರು ಮುಂದೆ ನೀಡುವ ದೂರನ್ನು ಆಧರಿಸಿ ಕ್ರಮ ಜರುಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ. ಇದೊಂದು ಲಾಕಪ್ ಡೆತ್ ಪ್ರಕರಣ ಆಗಿರುವುದರಿಂದ ಇದರ ತನಿಖೆಯನ್ನು ಸಿಐಡಿ ವಹಿಸಿಕೊಳ್ಳಲಿದೆ. ಮರಣೋತ್ತರ ಪರೀಕ್ಷೆಯನ್ನು ಎರಡು ತಂಡಗಳು ನೆರವೇರಿಸಲಿದ್ದು, ಅದರ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗುವುದು. ನ್ಯಾಯಾಧೀಶರ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *