LATEST NEWS
ಬ್ರಹ್ಮಾವರ – ಬಿಎಸ್ಸಿ ನರ್ಸಿಂಗ್ ವಿಧ್ಯಾರ್ಥಿನಿ ಆತ್ಮಹತ್ಯೆ

ಬ್ರಹ್ಮಾವರ, ಜುಲೈ19: ಬಿಎಸ್ಸಿ ನರ್ಸಿಂಗ್ ವಿಧ್ಯಾರ್ಥಿನಿ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಚೆರ್ಕಾಡಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ರಾಮ ಎಂಬವರ ಮಗಳು ರಶ್ಮಿತಾ(20) ಎಂದು ಗುರುತಿಸ ಲಾಗಿದೆ. ರಶ್ಮಿತಾ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ ಸುಮಾರು 6 ತಿಂಗಳಿಂದ ಕಾಲೇಜಿಗೆ ಹೋಗದೆ ಮನೆಯಲ್ಲಿಯೇ ಇದ್ದು, ಕಳೆದ ಎರಡೂವರೆ ತಿಂಗಳಿಂದ ಮಾನಸಿಕ ಖಾಯಿಲೆಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೇ ಕಾರಣದಿಂದ ಮಾನಸಿಕವಾಗಿ ನೊಂದ ಆಕೆ ಜೀವನದಲ್ಲಿ ಜಿಗುಪ್ಸೆ ಗೊಂಡು ಮನೆಯ ಕೋಣೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
