FILM
ದರ್ಶನ್ ಜೈಲ್ ದರ್ಬಾರ್ ಗೆ ಬ್ರೇಕ್, ದಾಸ ಬಳ್ಳಾರಿಗೆ ಶಿಫ್ಟ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ದರ್ಬಾರ್ ಗೆ ಬ್ರೇಕ್ ಬಿದ್ದಿದ್ದು, ಬಿಗಿ ಭದ್ರತೆಯಲ್ಲಿ ಆತನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಲ್ಲಿದ್ದ ದರ್ಶನ್ ನ ರಾಜಾತಿಥ್ಯದ ಫೋಟೋ ವೈರಲ್ ಆದ ಹಿನ್ನೆಲೆ FIR ದಾಖಲಾಗಿ ತನಿಖೆ ಕೂಡ ನಡೆಸಲಾಗ್ತಿದೆ. ಜೈಲಲ್ಲಿ ರಾಜಾತಿಥ್ಯ ನೀಡಿದ ಆರೋಪದಲ್ಲಿ 7 ಜನ ಅಧಿಕಾರಿಗಳನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಇದೇ ವೇಳೆ ದರ್ಶನ್‌ನನ್ನು ಬೆಂಗಳೂರಿನ ಸೆಂಟ್ರಲ್ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಇದೇ ಸಂದರ್ಭ ರೇಣುಕಾಸ್ವಾಮಿ ಕೊಲೆ ಕೇಸ್ ನ ಇತರ ಆರೋಪಿಗಳನ್ನು ಬೇರೆ ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದ್ರೆ ಮತ್ತಿತರ ಆರೋಪಿಗಳಾದ ಆರೋಪಿ ಪವನ್ , ರಾಘವೇಂದ್ರ ನಂದೀಶ್ ನನ್ನು ಮೈಸೂರು ಜೈಲಿಗೆ ಶಿಫ್ಟ್ ಮಾಡಲಿದ್ದಾರೆ. ಆರೋಪಿ ಜಗದೀಶ್ ಅವರನ್ನು ಶಿವಮೊಗ್ಗಕ್ಕೆ ಹಾಗೂ ಧನರಾಜ್ನನ್ನು ಧಾರವಾಡ ಜೈಲಿಗೆ ಸ್ಥಳಾಂತರಿಸಲು ಪೊಲೀಸರು ಸಿದ್ಧತೆ ಮಾಡಿಕೊಳ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿತಳಾದ ನಟಿ ಪವಿತ್ರಾ ಗೌಡ ಅವರು ಪರಪ್ಷನ ಅಗ್ರಹಾರ ಜೈಲಿನಲ್ಲೇ ಇರಲಿದ್ದಾರೆ. ಅನುಕುಮಾರ್ ಹಾಗೂ ದೀಪಕ್ ಕೂಡ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರಲಿದ್ದಾರೆ. ದರ್ಶನ್ ಅವರನ್ನು ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಜೈಲಿನಲ್ಲಿ ವಿಶೇಷ ಆತಿಥ್ಯಕ್ಕೆ ಸಂಬಂಧಿಸಿದಂತೆ ಮೂರು ಪ್ರಕರಣದ ತನಿಖೆಗೆ ಮೂರು ವಿಶೇಷ ತಂಡಗಳ ರಚನೆ ಮಾಡಲಾಗಿದೆ. ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮಾ ಅವರಿಂದ ಮೂರು ತಂಡಗಳ ರಚನೆ ಆಗಿದೆ.