DAKSHINA KANNADA
Kasargod : ತಾಯಿ ಎದೆಹಾಲು ಗಂಟಲಲ್ಲಿ ಸಿಲುಕಿ ಹಸುಗೂಸು ಸಾವು
ಕಾಸರಗೋಡು ಜನವರಿ 09: ಮಗುವನ್ನು ಮಲಗಿಸಿಕೊಂಡು ಎದೆಹಾಲು ಕುಡಿಸುವ ವೇಳೆ ಹಾಲು ಗಂಟಲಲ್ಲಿ ಸಿಲುಕಿ ಮಗು ಸಾವನಪ್ಪಿದ ಘಟನೆ ಮಂಗಳವಾರ ಬಂಬ್ರಾಣದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಅಬ್ದುಲ್ ಅಝೀಝ್-ಖದೀಜಾ ದಂಪತಿ ಪುತ್ರಿ, ಎರಡೂವರೆ ತಿಂಗಳ ಹಸುಳೆ ಮೃತಪಟ್ಟಿದೆ. ತಾಯಿ ಮಲಗಿಕೊಂಡು ಮಗುವಿಗೆ ಎದೆಹಾಲು ಕುಡಿಸುತ್ತಿದ್ದರು. ಈ ವೇಳೆ ಹಾಲು ಕುಡಿಯುತ್ತಿದ್ದ ಮಗು ಎಷ್ಟು ಹೊತ್ತಾದರೂ ಎಚ್ಚರಗೊಳ್ಳದೆ ಇದ್ದಾಗ ಕುಂಬಳೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅದಾಗಲೇ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು. ಕುಂಬಳೆ ಪೊಲೀಸರು ಮಹಜರು ನಡೆಸಿದರು.