LATEST NEWS
ಲಂಚ ತೆಗೆದುಕೊಂಡ ಮನಪಾ ಅಧಿಕಾರಿಗೆ 1 ಕೋಟಿ ದಂಡ..ನಾಲ್ಕು ವರ್ಷ ಜೈಲು…!!
ಮಂಗಳೂರು ಅಕ್ಟೋಬರ್ 15: ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಮಹಾನಗರ ಪಾಲಿಕೆಯ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ ಕೊಂಡಗೂಳಿ ಅವರಿಗೆ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ನಾಲ್ಕು ವರ್ಷ ಸಜೆ ಹಾಗೂ ₹ 1 ಕೋಟಿ ದಂಡ ವಿಧಿಸಿ ತೀರ್ಪು ನೀಡಿದೆ.
ಶಿವಲಿಂಗ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಬಗ್ಗೆ ವಿಶ್ವಾಸಾರ್ಹ ಮೂಲಗಳು ನೀಡಿದ ಮಾಹಿತಿ ಆಧರಿಸಿ ಲೋಕಾಯುಕ್ತ ಪೊಲೀಸರು 2013ರ ಫೆಬ್ರವರಿ 15ರಂದು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ‘ಆದೇಶ ಪ್ರಕಟವಾದ ಬಳಿಕ ಕೊಂಡಗೂಳಿಯನ್ನು ಬಂಧಿಸಿ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಅವರು ಆದಾಯಕ್ಕಿಂತ ಶೇ 237.5ರಷ್ಟು ಹೆಚ್ಚು ಆಸ್ತಿ ಹೊಂದಿರುವುದು ತನಿಖೆಯಲ್ಲಿ ಸಾಬೀತಾಗಿತ್ತು.
ಈ ಹಿನ್ನಲೆ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ನಾಲ್ಕು ವರ್ಷ ಸಜೆ ಹಾಗೂ ₹ 1 ಕೋಟಿ ದಂಡ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ. ದಂಡ ಕಟ್ಟಲು ಶಿವಲಿಂಗ ವಿಫಲ ನಾದರೆ ಮತ್ತೆ ಒಂದು ವರ್ಷ ಸಾದಾ ಸಜೆ ಅನುಭವಿಸಬೇಕು ಎಂದು ನ್ಯಾಯಾಧೀಶ ಬಿ.ಬಿ.ಜಕಾತಿ ಅವರು ತೀರ್ಪಿನಲ್ಲಿ ಹೇಳಿದ್ದಾರೆ