Connect with us

    BELTHANGADI

    ಖಾತೆ ಬದಲಾವಣೆಗೆ ಲಂಚ – ಪಿಡಿಓ ಲೋಕಾಯುಕ್ತ ಬಲೆಗೆ

    ಬೆಳ್ತಂಗಡಿ ಜೂನ್ 22: ಖಾತೆ ಬದಲಾವಣೆi ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಪಂಚಾಯತ್ ಅಭಿವೃದ್ದಿ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ.


    ಕೌಕ್ರಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಜಿ.ಎನ್ ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಅಧಿಕಾರಿ. ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ನಿವಾಸಿಯೊಬ್ಬರ ಕೌಕ್ರಾಡಿಯ ತಮ್ಮ ಜಮೀನಿನಲ್ಲಿ ಖಾತೆ ಬದಲಾವಣೆಗೆ 20 ಸಾವಿರ ಹಣಕ್ಕೆ ಬೇಡಿಕೆ ಇಟ್ಟದ್ದರು. ಅದರಂತೆ ಜೂ. 22 ರಂದು 20 ಸಾವಿರ ಲಂಚದ ಹಣ ಸ್ವೀಕರಿಸುವ ಸಂದರ್ಭದಲ್ಲಿ ಪಿಡಿಓ ಮಹೇಶ್‍ನನ್ನು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.

    ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ.ಎ ಸೈಮನ್ ಮಾರ್ಗದರ್ಶನದಲ್ಲಿ ಉಪಾಧೀಕ್ಷಕರಾದ ಕಲಾವತಿ, ಚೆಲುವರಾಜ್ ಹಾಗೂ ಪೊಲೀಸ್ ನಿರೀಕ್ಷಕರ ಅಮಾನುಲ್ಲಾ, ವಿನಾಯಕ ಬಿಲ್ಲವ ಹಾಗೂ ಸಿಬ್ಬಂದಿ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ

    Share Information
    Advertisement
    Click to comment

    You must be logged in to post a comment Login

    Leave a Reply