LATEST NEWS
ರಾಯಲ್ ಎನ್ ಫಿಲ್ಡ್ ಬುಲೆಟ್ ನಲ್ಲಿ ಮದುಮಗಳ ರಾಯಲ್ ಎಂಟ್ರಿ

ಮಂಗಳೂರು ನವೆಂಬರ್ 11: ಮದುವೆ ಮನೆಗೆ ಬುಲೆಟ್ ಬೈಕ್ ನಲ್ಲಿ ಮದುಮಗಳ ಎಂಟ್ರಿ ಈಗ ಮಂಗಳೂರಿನಲ್ಲಿ ಭಾರೀ ವೈರಲ್ ಆಗಿದೆ. ಮಂಗಳೂರಿನ ಸುರತ್ಕಲ್ ಮೂಲದ ಪೂಜಾ ಎಂಬ ವಧು ಬುಲೆಟ್ ಮೂಲಕ ಮದುವೆ ಮಂಟಪಕ್ಕೆ ಗ್ರ್ಯಾಂಡ್ ಎಂಟ್ರಿ ಈಗ ಸಖತ್ ವೈರಲ್
ಕಾಸರಗೋಡು ಮೂಲದ ಮ್ಯಾಚ್ ಫ್ರೇಮ್ ವೆಡ್ಡಿಂಗ್ ಸಂಸ್ಥೆಯ ಕ್ಯಾಮರಮೆನ್ಸ್ ಈ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಸುರತ್ಕಲ್ನ ಪೂಜಾ ಹಾಗೂ ಆಕಾಶ್ ಮದುವೆ ನವೆಂಬರ್ ನಾಲ್ಕರಂದು ನಡೆದಿತ್ತು. ಬುಲೆಟ್ ಪ್ರೇಮಿಯಾಗಿರುವ ಪೂಜಾ, ಸಿಂಗಾರಗೊಂಡಿದ್ದ ಕಾರನ್ನು ಹತ್ತಿ ಬರುವ ಬದಲು ತನ್ನ ಸ್ವಂತ ಬುಲೆಟ್ ಓಡಿಸಿಕೊಂಡು ಮದುವೆ ಮಂಟಪಕ್ಕೆ ಎಂಟ್ರಿಯಾಗಿದ್ದಳು. ಬುಲೆಟ್ ರಾಣಿಯ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ.
