LATEST NEWS
ಬ್ರಿಟನ್ ಪ್ರಧಾನಿ ಗದ್ದುಗೆ ಏರಿದ ಲಿಜ್ ಟ್ರಸ್- ಭಾರತದ ರಿಷಿಗೆ ಸೋಲು
ಲಂಡನ್, ಸೆಪ್ಟೆಂಬರ್ 05: ಬ್ರಿಟನ್‍ನ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆಯಾಗಿದ್ದಾರೆ. ಬೋರಿಸ್ ಜಾನ್ಸನ್ ಬ್ರಿಟನ್ ಪ್ರಧಾನಿ ಸ್ಥಾನದಿಂದ ಕೆಳಗಿಳಿದ ಬಳಿಕ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂಬ ಪ್ರಶ್ನೆ ಮನೆಮಾಡಿತ್ತು.
ಬಳಿಕ ಭಾರತ ಮೂಲದ ರಿಷಿ ಸುನಾಕ್ ರಕ್ಷಣಾ ಕಾರ್ಯದರ್ಶಿ ಬೆನ್ ವ್ಯಾಲೇಸ್, ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್, ಮಾಜಿ ಆರೋಗ್ಯ ಕಾರ್ಯದರ್ಶಿ ಸಾಜಿದ್ ಜಾವಿದ್ ಪ್ರಧಾನಿ ಹುದ್ದೆಗೆ ಸ್ಫರ್ಧಿಸಿದ್ದರು. ಇವರಲ್ಲಿ ರಿಷಿ ಸುನಕ್ ಮತ್ತು ಲಿಜ್ ಟ್ರಸ್ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದರು.
ಆ ಬಳಿಕ ಬೋರಿಸ್ ಜಾನ್ಸನ್ ವಿರುದ್ಧ ಭಿನ್ನಾಭಿಪ್ರಾಯದಿಂದ ಸಾಜಿದ್ ಜಾವೇಜ್ ರಾಜೀನಾಮೆ ನೀಡಿದ ಬೆನ್ನಲ್ಲೇ ರಿಷಿ ಸುನಕ್ ಕೂಡ ಹಣಕಾಸು ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಪ್ರಧಾನಿ ಹುದ್ದೆಗೆ ಸ್ಫರ್ಧಿಸಿ ಅಂತಿಮ ಸುತ್ತಿಗೆ ಆಯ್ಕೆಗೊಂಡಿದ್ದರು.
ಪ್ರಧಾನಿ ಬೋರಿಸ್ ಜಾನ್ಸನ್ ಜುಲೈ 7 ರಂದು ಕನ್ಸರ್ವೇಟಿವ್ ಪಕ್ಷದ ನಾಯಕತ್ವವನ್ನು ತ್ಯಜಿಸುವುದಾಗಿ ಘೋಷಿಸಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದೀಗ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆಗೊಂಡಿದ್ದಾರೆ.