Connect with us

BANTWAL

ಬಂಟ್ವಾಳ – ದುಷ್ಕರ್ಮಿಗಳಿಂದ ತಲ್ವಾರ್ ದಾಳಿ ಯುವಕನ ಬರ್ಬರವಾಗಿ ಕಡಿದು ಕೊಲೆ

ಬಂಟ್ವಾಳ ಮೇ 27: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ನಡೆದಿದೆ.


ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತಲ್ವಾರ್ ದಾಳಿ ನಡೆಸಿದ್ದಾರೆ. ಈ ವೇಳೆ ಓರ್ವ ಯುವಕ ಸಾವನಪ್ಪಿದ್ದು, ಜೊತೆಗಿದ್ದ ಮತ್ತೊಬ್ಬರಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಳತ್ತಮಜಲು ನಿವಾಸಿ ರಹೀಂ (34) ಎಂಬಾತ ಹತ್ಯೆಯಾದ ವ್ಯಕ್ತಿ. ಆತ ಇರಾಕೋಡಿಯಲ್ಲಿ ಪಿಕಪ್ ವಾಹನದಿಂದ ಮರಳನ್ನು ಇಳಿಸುವ ಸಂದರ್ಭದಲ್ಲಿ, ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ದಾಳಿಯ ಸಂದರ್ಭದಲ್ಲಿ ರಹೀಂ ಜೊತೆ ಇದ್ದ ಮತ್ತೊಬ್ಬ ವ್ಯಕ್ತಿಯ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಆತನ ಕೈಗೆ ಏಟಾಗಿದೆ ಎಂದು ಗೊತ್ತಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Share Information
Continue Reading
Advertisement
1 Comment

1 Comment

    Leave a Reply

    Your email address will not be published. Required fields are marked *