Connect with us

  KARNATAKA

  ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ..!

  ಗದಗ: ಗದಗ ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ದಾಸರ ಓಣಿಯಲ್ಲಿ ನಡೆದಿದೆ.

  ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಆತನ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಗೀಡಾದವರು. ಮೃತರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಕ್ಕಳನ್ನು ಕೊಲೆ ಮಾಡಲಾಗಿದೆ. ಕೊಲೆ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮೃತರಲ್ಲಿ ಮೂವರು ಕೊಪ್ಪಳ ಮೂಲದವರಾಗಿದ್ದಾರೆ. ಎಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕನ ಮದುವೆ ಫಿಕ್ಸ್ ಮಾಡುವ ಕಾರ್ಯಕ್ರಮಕ್ಕೆ ಕೊಪ್ಪಳದಿಂದ ಸಂಬಂಧಿಗಳು ಆಗಮಿಸಿದ್ದರು. ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಪೊಲೀಸರಿಗೆ ಫೋನ್ ಮಾಡಲಾಗುತ್ತಿತ್ತು.

  ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬಾಗಿಲು ತೆಗೆದಿದ್ದರೆ ನಮ್ಮನ್ನು ಕೊಲೆ ಮಾಡುತ್ತಿದ್ದರು ಎಂದು ಮನೆ ಮಾಲೀಕ‌ ಪ್ರಕಾಶ್ ಬಾಕಳೆ ಕಣ್ಣೀರು ಹಾಕುತ್ತಿದ್ದಾರೆ. ಈ ಘಟನೆಯಿಂದ ಸ್ಥಳೀಯ ಜನರು ಬೆಚ್ಚಿಬಿದ್ದಿದ್ದಾರೆ.ಸುದ್ದಿ ತಿಳಿದು ಶ್ವಾನದಳದೊಂದಿಗೆ ಘಟನಾ ಸ್ಥಳಕ್ಕೆ ಬಂದ ಸ್ಥಳೀಯ ಪೊಲೀಸರು ಇಂಚಿಂಚು ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಹೆಚ್ಚುವರಿ ಪೊಲೀಸ್​ ವರಿಷ್ಠಾಧಿಕಾರಿ ಎಂ.ಬಿ. ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಕೊಲೆಯಾದ ಸ್ಥಳಕ್ಕೆ ಸಚಿವ ಹೆಚ್​ ಕೆ ಪಾಟೀಲ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರಕಾಶ್ ಬಾಕಳೆ ಕುಟುಂಬಕ್ಕೆ ಧೈರ್ಯ ಹೇಳಿದ ಸಚಿವರು, ಇದೊಂದು ದುರ್ದೈವದ ಸಂಗತಿ, ಅಮಾನುಷ ಘಟನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲೆಗಡುಕರ ಪತ್ತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

   

  Share Information
  Advertisement
  Click to comment

  You must be logged in to post a comment Login

  Leave a Reply