LATEST NEWS
ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ
ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ
ಬೆಂಗಳೂರು ಮೇ 17: ಕರ್ನಾಟಕದಲ್ಲಿ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ವಿರೋಧದ ನಡುವೆಯೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಕರ್ನಾಟಕದ ನೂತನ ಮೂಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನಿನ್ನೆ ರಾಜ್ಯಪಾಲರು ಬಿಜೆಪಿಗೆ ಸರಕಾರ ರಚಿಸಲು ಆಹ್ವಾನ ನೀಡಿದ ಬೆನ್ನಲೆ ಬಿಜೆಪಿ ಇಂದು ಬೆಂಗಳೂರಿನ ರಾಜಭವನದ ಆವರಣದಲ್ಲಿರುವ ಗಾಜಿನ ಮನೆಯಲ್ಲಿ ಬಿಎಸ್ ವೈ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ ಅವರು ಬಿಎಸ್ ವೈಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರೈತರು ಮತ್ತು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಆ ಮೂಲಕ ಬಿಎಸ್ ವೈ ಮೂರನೇ ಬಾರಿಗೆ ಮತ್ತು ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ಬಿಎಸ್ ವೈ ಪದಗ್ರಹಣ ಮಾಡಿದ್ದಾರೆ. ಈ ವೇಳೆ ರಾಜಭವನದ ಆವರಣದಲ್ಲಿ ಮತ್ತು ರಾಜನಭವನದ ಹೊರಗೆ ನೆರೆದಿದ್ದ ಸಾವಿರಾರು ಬಿಜೆಪಿ ಕಾರ್ಯಕರ್ತರು ಬಿಎಸ್ ವೈ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈಕಾರ ಕೂಗಿದರು.