LATEST NEWS
ಪಾಕ್ ವಶದಲ್ಲಿದ್ದ ಬಿಎಸ್‌ಎಫ್ ಯೋಧ ಭಾರತಕ್ಕೆ ಹಸ್ತಾಂತರ

ಅಮೃತಸರ, ಮೇ 14: ಏ.23 ರಂದು ಆಕಸ್ಮಿಕವಾಗಿ ಅಂತರರಾಷ್ಟ್ರೀಯ ಗಡಿ ರೇಖೆ ದಾಟಿದ ಕಾರಣಕ್ಕೆ ಪಾಕ್ ಸೇನೆಯಿಂದ ಬಂಧಿತರಾಗಿದ್ದ ಬಿಎಸ್‌ಎಫ್ ಯೋಧ ಪೂರ್ಣಂ ಸಾಹು ಅವರನ್ನು ಪಾಕಿಸ್ತಾನ ಪಂಜಾಬ್‌ನ ಅಟ್ಟಾರಿ-ವಾಘಾ ಗಡಿ ಮುಂಭಾಗದ ಮೂಲಕ ಭಾರತಕ್ಕೆ ಹಸ್ತಾಂತರಿಸಿದೆ ಎಂದು ಸೇನಾಪಡೆ ತಿಳಿಸಿದೆ.
ಬುಧವಾರ ಬೆಳಿಗ್ಗೆ 10.30ಕ್ಕೆ ಪಾಕಿಸ್ತಾನದ ರೇಂಜರ್‌ಗಳು ಸಾಹು ಅವರನ್ನು ಬಿಎಸ್‌ಎಫ್ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಹಸ್ತಾಂತರವನ್ನು ಶಾಂತಿಯುತವಾಗಿ, ಶಿಷ್ಟಾಚಾರಗಳಿಗೆ ಅನುಸಾರವಾಗಿ ನಡೆಸಲಾಯಿತು ಎಂದು ಬಿಎಸ್‌ಎಫ್ ವಕ್ತಾರರು ತಿಳಿಸಿದ್ದಾರೆ.

ಪಹಲ್ಯಾಮ್‌ನಲ್ಲಿ ಉಗ್ರರು ದಾಳಿ ನಡೆಸಿದ ಒಂದು ದಿನದ ನಂತರ, ಏಪ್ರಿಲ್ 23 ರಂದು ಫಿರೋಜ್‌ಪುರ ಜಿಲ್ಲೆಯ ಭಾರತ-ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಯಲ್ಲಿ ಸಾಹು ಅವರನ್ನು ರೇಂಜರ್‌ಗಳು ಬಂಧಿಸಿದ್ದರು.