Connect with us

KARNATAKA

ಬಿಎಸ್ ವೈ ಬಿಗ್ ಎನೌನ್ಸ್ ಮೆಂಟ್…ಪುತ್ರನಿಗೆ ತಮ್ಮ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಟ್ಟ ಯಡಿಯೂರಪ್ಪ

ಶಿವಮೊಗ್ಗ ಜುಲೈ 22: ರಾಜ್ಯ ರಾಜಕೀಯದಲ್ಲಿ ಬಿಎಸ್ ವೈ ಯಡಿಯೂರಪ್ಪ ಮಾಡಿರುವ ಘೋಷಣೆ ಭಾರೀ ಚರ್ಚೆ ಹುಟ್ಟುಹಾಕಿದೆ. ತಮ್ಮ ಪುತ್ರನಿಗಾಗಿ ತಮ್ಮ ಶಿಕಾರಿಪುರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದು ಬಿಎಸ್‌ವೈ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.


ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಶಿಕಾರಿಪುರದಲ್ಲಿ ನಿಲ್ಲುತ್ತಿಲ್ಲ. ವಿಜಯೇಂದ್ರ ಅವರೇ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡುತ್ತಾರೆ. ಬಹಳ ದೊಡ್ಡ ಅಂತರದಲ್ಲಿ ಅವನನ್ನು ಗೆಲ್ಲಿಸಿಕೊಡಬೇಕು ಅಂತಾ ಶಿಕಾರಿಪುರ ಜನತೆಯಲ್ಲಿ‌ ಕೈಜೋಡಿಸಿ ಪ್ರಾರ್ಥನೆ ಮಾಡುತ್ತಿದ್ದೇನೆ ಎಂದು ಮನವಿ ಮಾಡಿದರು.

ಮೈಸೂರು ಭಾಗದಿಂದ ಸ್ಪರ್ಧಿಸಲು ವಿಜಯೇಂದ್ರಗೆ ಒತ್ತಡವಿದೆ. ಆದರೆ ಶಿಕಾರಿಪುರದಲ್ಲಿ ಸ್ಥಾನ ತೆರವಾಗುವುದರಿಂದ ಅವರು ಶಿಕಾರಿಪುರದಲ್ಲೇ ಸ್ಪರ್ಧಿಸಲಿದ್ದಾರೆ ಎಂದರು.

Advertisement
Click to comment

You must be logged in to post a comment Login

Leave a Reply