Connect with us

KARNATAKA

ಕಣ್ಣೀರುಡುತ್ತಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ಎಸ್ ಯಡಿಯೂರಪ್ಪ

ಬೆಂಗಳೂರು ಜುಲೈ 26: ಕೊನೆಗೂ ಬಿಎಸ್ ವೈ ರಾಜಿನಾಮೆ ಸಸ್ಪೆನ್ಸ್ ಕೊನೆಯಾಗಿದ್ದು, ಕಣ್ಣೀರುಡತ್ತಲೇ ಸಿಎಂ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ರಾಜಿನಾಮೆ ನೀಡಿದ್ದಾರೆ.


ಬಿಜೆಪಿ ಸರ್ಕಾರದ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಯಡಿಯೂರಪ್ಪ ತಮ್ಮ ಭಾಷಣೆ ಸಂದರ್ಭ ತುಂಬಾ ಭಾವುಕವಾಗಿ ಮಾತನಾಡಿದರು.

ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು 75 ವರ್ಷ ಮೇಲ್ಪಟ್ಟ ನಾಯಕರಿಗೆ ಸ್ಥಾನಮಾನ ಕೊಡುವುದಿಲ್ಲ ಎಂಬ ತೀರ್ಮಾನವನ್ನು ತೆಗೆದುಕೊಂಡರು. ಯಾರಿಗೂ ಅವಕಾಶ ಕೊಡಲಿಲ್ಲ. ಆದರೆ, ನನ್ನ ಬಗ್ಗೆ ಅತ್ಯಂ ತ ವಾತ್ಸಲ್ಯ, ಪ್ರೀ ತಿ ಮತ್ತು ವಿಶ್ವಾಸದಿಂದ ಅವಕಾಶ ಮಾಡಿಕೊಟ್ಟರು. ಎರಡು ವರ್ಷ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟರು ಎಂದು ಕಣ್ಣೀ ರಾಕುತ್ತಲೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ರಾಜೀನಾಮೆ ಘೋಷಣೆ ಮಾಡಿದರು.