Connect with us

    UDUPI

    ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳಿಗೆ ಉತ್ತಮ ವಾತಾವರಣ ನಿರ್ಮಿಸಿ:ನ್ಯಾ.ದಿನೇಶ್ ರಾವ್

    ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳಿಗೆ ಉತ್ತಮ ವಾತಾವರಣ ನಿರ್ಮಿಸಿ:ನ್ಯಾ.ದಿನೇಶ್ ರಾವ್

    ಉಡುಪಿ, ಡಿಸೆಂಬರ್ 02 : ಕಾನೂನಿನ ಸಂಘರ್ಷಕ್ಕೆ ಸಿಲುಕಿ, ವೀಕ್ಷಣಾಲಯದಲ್ಲಿರುವ ಮಕ್ಕಳಿಗೆ ಉತ್ತಮ ವಾತಾವರಣ ನಿರ್ಮಿಸಿ.

    ಮಕ್ಕಳನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಸಂಬಂಧಪಟ್ಟ ಪ್ರತಿಯೊಂದು ಇಲಾಖೆ ಹಾಗೂ ಸಂಸ್ಥೆಗಳ ಜವಾಬ್ದಾರಿ ಎಂದು ಕರ್ನಾಟಕ ರಾಜ್ಯ ಹೈಕೋರ್ಟ್ ನ ನ್ಯಾಯಾಧೀಶ ದಿನೇಶ್ ರಾವ್ ತಿಳಿಸಿದ್ದಾರೆ.

    ನಿಟ್ಟೂರಿನ ಸರಕಾರಿ ವೀಕ್ಷಣಾಲಯದಲ್ಲಿ ನಿರ್ಮಿಸಿರುವ ಬ್ಯಾಡ್ಮಿಂಟನ್ ಕೋರ್ಟ್ ಉದ್ಘಾಟಿಸಿ ಮಾತನಾಡಿದರು.

    ಮಕ್ಕಳು ತಮಗೆ ಅರಿವಿಲ್ಲದೆಯೇ ಕಾನೂನು ಸಂಘರ್ಷಕ್ಕೆ ಸಿಲುಕಿಕೊಳ್ಳುತ್ತಾರೆ, ಅವರಿಗೆ ಸರಿಯಾದ ಮಾರ್ಗದರ್ಶನ

    ನೀಡಿ , ಸಮಾಜದ ಉತ್ತಮ ವ್ಯಕ್ತಿಯಾಗಿ ರೂಪುಗೊಳಿಸಲು ಅವರಿಗೆ ಉತ್ತಮ ವಾತಾವರಣ ನಿರ್ಮಿಸಬೇಕು.

    ವೀಕ್ಷಣಾಲಯಗಳಲ್ಲಿ ಅವರಿಗೆ ಯೋಗ, ಪ್ರಾಣಾಯಾಮದಂತಹ ಚಟುವಟಿಕೆಗಳ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಸೌಲಭ್ಯಗಳನ್ನು ಒದಗಿಸಬೇಕು.

    ಕ್ರೀಡೆಯಿಂದ ಮಕ್ಕಳ ಮನಸ್ಸು ಆಹ್ಲಾದಕರವಾಗಿರುವುದಲ್ಲದೇ , ಮಕ್ಕಳಿಗೆ ಉತ್ತಮ ವ್ಯಾಯಾಮ ದೊರೆಯಲಿದೆ ಎಂದು ನ್ಯಾಯಧೀಶರು ಹೇಳಿದರು.

    ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವ ಪ್ರಾಧಿಕಾರದ ಅಧ್ಯಕ್ಷ ವೆಂಕಟೇಶ್ ನಾಯ್ಕ್ ಟಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೋನ್ಸಾಲ್ವಿಸ್,ಬಿ.ಕೆ. ನಾರಾಯಣ್, ಬಾಲ ನ್ಯಾಯ ಮಂಡಳಿ ಸದಸ್ಯೆ ಅಮೃತಕಲಾ,ಸರ್ವೇಶ್ವರ  ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply