Connect with us

LATEST NEWS

ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ 15ಕ್ಕೂ ಹೆಚ್ಚು ಮಂದಿಗೆ ಗಾಯ

ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ 15ಕ್ಕೂ ಹೆಚ್ಚು ಮಂದಿಗೆ ಗಾಯ

ಉಡುಪಿ ಮೇ 23: ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 15ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ನಡೆದಿದೆ.

ಉಡುಪಿಯ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಅಪಘಾತ ಸಂಭವಿಸಿದ್ದು. ಖಾಸಗಿ ಬಸ್ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಈ ಘಟನೆ ನಡೆದಿದೆ.

ಖಾಸಗಿ ಬಸ್ ವಾಹನವನ್ನು ಹಿಂದಿಕ್ಕುವ ಭರದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಸಿಮೆಂಟ್ ಇಟ್ಟಿಗೆ ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬಸ್ ನ ಮುಂಭಾಗ ನಜ್ಜುಗುಜ್ಜಾಗಿದ್ದು, ಅಪಘಾತದಲ್ಲಿ 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಕ್ಕಿ ರಭಸಕ್ಕೆ ಲಾರಿ ಗದ್ದೆಗೆ ಉರುಳಿದ್ದು, ಲಾರಿಯಲ್ಲಿದ್ದ ಸಿಮೆಂಟ್ ಇಟ್ಟಿಗೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *