Connect with us

LATEST NEWS

100 ಅಡಿ ಕಣಿವೆಗೆ ಉರುಳಿ ಬಿದ್ದ ಬಸ್ 7 ಮಂದಿ ಸಾವು…!!

ಚಿತ್ತೂರು: ಬಸ್ ಚಾಲಕನ ಅಜಾಗರೂಕತೆಯ ಚಾಲನೆಯಿಂದಾಗಿ ಉಂಟಾದ ಅಪಘಾತಕ್ಕೆ 7 ಮಂದಿ ಪ್ರಾಣ ಕಳೆದುಕೊಂಡ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ-ತಿರುಪತಿ ಹೆದ್ದಾರಿಯ ಬಳಿಯ ಬಕರಾಪೇಟ ಕಣುಮಾ ಎಂಬಲ್ಲಿ ಭಾನುವಾರ ನಡೆದಿದೆ.

ಮೃತರನ್ನು ಮಾಲಿಶೆಟ್ಟಿ ವೆಂಗಪ್ಪ (60), ಮಾಲಿಶೆಟ್ಟಿ ಮುರಳಿ (45), ಕಾಂತಮ್ಮ (40), ಮಾಲಿಶೆಟ್ಟಿ ಗಣೇಶ್ (40), ಜೆ.ಯಶಸ್ವಿನಿ (8), ಚಾಲಕ ನಬಿ ರಸೂಲ್ ಮತ್ತು ಕ್ಲೀನರ್ ಎಂದು ಗುರುತಿಸಲಾಗಿದೆ. 45ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ.

ಮದುವೆ ನಿಶ್ಚಿತಾರ್ಥಕ್ಕೆ ಜನರನ್ನು ಹೊತ್ತು ಸಾಗುತ್ತಿದ್ದ ಬಸ್​ ನ ಚಾಲಕ ವೇಗವಾಗಿ ವಾಹನ​ ಚಲಾಯಿಸಿದ್ದರಿಂದ ತಿರುವಿನಲ್ಲಿ ಬಸ್ ನಿಯಂತ್ರಣ ತಪ್ಪಿ, ಸುಮಾರು 100 ಅಡಿಯ ಕಣಿವೆಗೆ ಉರುಳಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ 7 ಮಂದಿ ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದು, 45 ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿದ್ದು, ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ

Advertisement
Click to comment

You must be logged in to post a comment Login

Leave a Reply