Connect with us

    LATEST NEWS

    ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ – 8 ಮಂದಿ ಸಾವು

    ಉತ್ತರ ಪ್ರದೇಶ ಜುಲೈ 25: ಎರಡು ಬಸ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 8 ಮಂದಿ ಸಾವನಪ್ಪಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಡೆದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


    ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್‌ಪ್ರೆಸ್‌ ವೇನಲ್ಲಿ ಚಲಿಸುತ್ತಿದ್ದ ಬಸ್‍ಗಳು ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ತಲುಪುತಿದ್ದಂತೆ ಅಪಘಾತ ಸಂಭವಿಸಿದೆ. ಎರಡೂ ಬಸ್‍ಗಳು ಬಿಹಾರದ ಸೀತಾಮರ್ಹಿ ಮತ್ತು ಸುಪೌಲ್‍ನಿಂದ ದೆಹಲಿಗೆ ಹೋಗುತ್ತಿದ್ದವು. ಬಸ್‍ಗಳ ನಡುವಿನ ಡಿಕ್ಕಿಯ ರಭಸಕ್ಕೆ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 3 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್‍ಗಳೆರಡು ಸಂಪೂರ್ಣ ಜಖಂ ಗೊಂಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply