ಸುಳ್ಯ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಶಿಕ್ಷಕಿ ಸ್ಥಳದಲ್ಲೇ ಸಾವು

ಸುಳ್ಯ ಅಕ್ಟೋಬರ್ 19: ರಸ್ತೆ ದಾಟುತ್ತಿದ್ದ ಶಿಕ್ಷಕಿಯೋರ್ವರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶಾಂತಿನಗರ ಶಾಲೆಯ ಶಿಕ್ಷಕಿ ಮೀನಾಕ್ಷಿ ಎಂದು ಗುರುತಿಸಲಾಗಿದೆ. ಮೀನಾಕ್ಷಿ ಅವರು ಸುಳ್ಯದ ಹಳೇಗೇಟು ಸಮೀಪದ ವಿದ್ಯಾನಗರ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯದಿಂದ ಬಂದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

Facebook Comments

comments