LATEST NEWS
ಫರಂಗಿಪೇಟೆ – ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಸವಾರ ಸಾವು

ಮಂಗಳೂರು ಡಿಸೆಂಬರ್ 24: ಖಾಸಗಿ ಬಸ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿ ಅವರ ಪತ್ನಿ ಹಾಗೂ ಮಗು ಸಣ್ಣಪುಟ್ಟ ಗಾಯದೊಂದಿಗೆ ಪಾರಾದ ಘಟನೆ ಅರ್ಕುಳ ದ್ವಾರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಕುಕ್ಕಾಜೆ ನಿವಾಸಿ ಹಂಝ ಯಾನೆ ರಮ್ಲಾನ್ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಹಿಂದಿನಿಂದ ಬಂದ ಬಸ್ ಬೈಕ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ರಮ್ಲಾನ್ ಮೃತಪಟ್ಟರು ಎಂದು ತಿಳಿದು ಬಂದಿದೆ. ಬೈಕ್ ನ ಹಿಂಬದಿಯಲ್ಲಿದ್ದ ರಮ್ಲಾನ್ ಅವರ ಪತ್ನಿ ಬಜಾಲ್ ಮೂಲದ ರೈಹಾನ ಮತ್ತು ಮಗು ಅದೃಷ್ವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
