DAKSHINA KANNADA
ಪೊಲ್ಯ ಬಳಿ ಕಾರು ಬಸ್ ಮುಖಾಮುಖಿ ಡಿಕ್ಕಿ ಕಾರು ಚಾಲಕ ಸ್ಥಳದಲ್ಲೇ ಸಾವು

ಪೊಲ್ಯ ಬಳಿ ಕಾರು ಬಸ್ ಮುಖಾಮುಖಿ ಡಿಕ್ಕಿ ಕಾರು ಚಾಲಕ ಸ್ಥಳದಲ್ಲೇ ಸಾವು
ಪುತ್ತೂರು ಅಗಸ್ಟ್ 12:ಬಸ್ ಮತ್ತು ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಚಾಲಕ ಮೃತಪಟ್ಟಿರುವ ಘಟನೆ ಪುತ್ತೂರಿನ ಕಬಕ ಸಮೀಪದ ಪೊಲ್ಯ ಎಂಬಲ್ಲಿ ನಡೆದಿದೆ.
ಮೃತ ಕಾರು ಚಾಲಕನನ್ನು ಈಶ್ವರಮಂಗಲ ನಿವಾಸಿ ಹಕೀಮ್ ಎಂದು ಗುರುತಿಸಲಾಗಿದೆ. ಮೃತ ಚಾಲಕ ಬಕ್ರೀದ್ ಹಬ್ಬ ಪ್ರಯುಕ್ತ ಸಂಬಂಧಿಕರ ಮನೆಗೆ ತೆರಳುತ್ತಿದ್ದ ಸಂದರ್ಭ ಮಾಣಿ ಮೈಸೂರು ರಾಜ್ಯ ಹೆದ್ದಾರಿ ಪೊಲ್ಯ ಬಳಿ ಈ ಈ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತ ಹಿನ್ನಲೆ ಘಟನಾ ಸ್ಥಳದಲ್ಲಿ ಬಾರಿ ಸಂಖ್ಯೆಯಲ್ಲಿ ಜನರು ಜಮಾವಣೆಗೊಂಡಿದ್ದರು, ಕೆಲ ಉದ್ರಿಕ್ತರು ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಘಟನೆ ಕೂಡ ನಡೆಯಿತು. ಈ ಹಿನ್ನಲೆಯಲ್ಲಿ ಮಾಣಿ ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.