Connect with us

    BANTWAL

    ಬಂಟ್ವಾಳ – ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಅಪಘಾತ

    ಬಂಟ್ವಾಳ ಸೆಪ್ಟೆಂಬರ್ 16: ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


    ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಂಟೈನರ್ ಲಾರಿ ನಡುವೆ ಅಪಘಾತ ಸಂಭವಿಸಿದ್ದು. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಗೆ ಸರಿದು ನಿಂತಿದೆ.


    ಅಪಘಾತದ ಬಳಿಕ ಲಾರಿ ಚಾಲಕ ಲಾರಿ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳೀಯ ಯುವಕರ ತಂಡ ಲಾರಿಯನ್ನು ಸುಮಾರು 5 ಕಿ.ಮೀ. ದೂರದ ವರೆಗೆ ಬೆನ್ನಟ್ಟಿದ ತಡೆದು ನಿಲ್ಲಿಸಿ ಅದರ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದೆ.
    ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply