LATEST NEWS
ಮೂಡಬಿದಿರೆ – ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಸ್ ಕಂಡಕ್ಟರ್ ಅರೆಸ್ಟ್
ಮೂಡುಬಿದಿರೆ ಜನವರಿ 22: ಬಸ್ ಟಿಕೆಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಯಾಣಿಕ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಬಸ್ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಶಾಲೋಮ್ ಬಸ್ ನ ನಿರ್ವಾಹಕ ಪ್ರಶಾಂತ್ ಪೂಜಾರಿ ಎಂದು ಗುರುತಿಸಲಾಗಿದೆ.
ಮಹಿಳೆಯರು ಪ್ರತಿನಿತ್ಯ ಶಾಲೊಮ್ ಬಸ್ ನಲ್ಲಿ ಕೆಲಸಕ್ಕೆ ಬರುತ್ತಿದ್ದರು, ಕೆಲವೊಮ್ಮೆ ಬೇರೆ ಬಸ್ ಗಳಲ್ಲಿ ಸಂಚರಿಸುತ್ತಿದ್ದರು. ಈ ನಡುವೆ ಬಸ್ ಕಂಡಕ್ಟರ್ ಪ್ರಶಾಂತ್ ಪೂಜಾರಿ ಪ್ರತಿ ದಿನ ಇದೇ ಬಸ್ಸಿನಲ್ಲಿ ಬರದಿದ್ದರೆ ರಿಯಾಯಿತಿ ದರದಲ್ಲಿ ಟಿಕೆಟ್ ನೀಡಲು ಆಗದು ಎಂದು ನಿರಾಕರಿಸಿದ್ದಾನೆ ಎಂದು ಹೇಳಲಾಗಿದ್ದು, ಇದೇ ವಿಚಾರಕ್ಕೆ ಮಹಿಳಾ ಪ್ರಯಾಣಿರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದೇ ವಿಷಯಕ್ಕೆ ಮಹಿಳೆ ಜತೆ ವಾಗ್ವಾದ ನಡೆಸಿದ್ದ ನಿರ್ವಾಹಕ ಆಕೆಗೆ ಕಪಾಳಕ್ಕೆ ಹೊಡೆದಿದ್ದಾನೆ ಎಂದು ಆರೋಪಿಸಿ ದೂರು ನೀಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಯನ್ನು ಬುಧವಾರ ಬಂಧಿಸಲಾಗಿದೆ. ಆತನ ವಿರುದ್ಧ ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.