LATEST NEWS
ಮಂಗಳೂರು – ರಾಜ್ಯ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್ – ವಿಡಿಯೋ ವೈರಲ್

ಮಂಗಳೂರು ಏಪ್ರಿಲ್ 24: ಕರ್ನಾಟಕ ರಾಜ್ಯ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಈ ಕುರಿತಂತೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಕಂಡಕ್ಟರನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಂಗಳೂರಿನ ಮುಡಿಪು -ಸ್ಟೇಟ್ ಬ್ಯಾಂಕ್ ಭಾಗದ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದ್ದು, ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪೊಲೀಸರು, ಆರೋಪಿ ಬಾಗಲಕೋಟೆ ಮೂಲದ ಪ್ರದೀಪ್ (35) ವಶಕ್ಕೆ ಪಡೆದಿದ್ದಾರೆ.

ಏಪ್ರಿಲ್ 22 ರಂದು ಮುಡಿಪುವಿನಿಂದ ಸ್ಟೇಟ್ ಬ್ಯಾಂಕ್ನತ್ತ ತೆರಳುತ್ತಿದ್ದ ಬಸ್ನಲ್ಲಿ ಯುವತಿ ನಿದ್ರೆಗೆ ಜಾರಿದ್ದರು. ಆ ಸಂದರ್ಭದಲ್ಲಿ ಕಂಡಕ್ಟರ್ ಆ ಯುವತಿಗೆ ಕಿರುಕುಳ ನೀಡಿದ್ದಾನೆ. ಇದನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.
1 Comment