KARNATAKA
ಅಂಕೋಲಾ – ಕಿರು ಸೇತವೆಯಿಂದ ಕೆಳಕ್ಕೆ ಬಿದ್ದ ಬೆಳಗಾವಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಬಸ್

ಅಂಕೋಲಾ ಜುಲೈ 21: ಬೆಳಗಾವಿಯಿಂದ ಮಂಗಳೂರಿಗೆ ಅಂಕೋಲಾ ಮಾರ್ಗವಾಗಿ ಬರುತ್ದಿದ್ದ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಕಿರುಸೇತುವೆಯಿಂದ ಹಳ್ಳಕ್ಕೆ ಬಿದ್ದ ಘಟನೆ ನಡೆದಿದ್ದು, ಅಪಘಾತದಲ್ಲಿ ಓರ್ವ ಸಾವನಪ್ಪಿದ್ದು, 18 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದೆ.
ನಸುಕಿನ 2 ಗಂಟೆಗೆ ಸುಮಾರಿಗೆ ದುರ್ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 18 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇನ್ನೂ ಗಂಭೀರ ಗಾಯಗೊಂಡ 5 ಜನರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಮತ್ತು ಮಂಗಳೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಅಂಕೋಲಾ ಠಾಣೆ ಪೊಲೀಸರು ತಿಳಿಸಿದ್ದಾರೆ.
