LATEST NEWS
ಬಸ್ ಸ್ಟ್ಯಾಂಡ್ ಗೆ ಡಿಕ್ಕಿ ಹೊಡೆದ ಪೊಲೀಸ್ ಜೀಪ್ – ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೆ ಗಾಯ

ಮಂಗಳೂರು ಜನವರಿ 3: ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಸ್ಟ್ಯಾಂಡ್ ಗೆ ಡಿಕ್ಕಿ ಹೊಡೆದ ಘಟನೆ ಎಡಪದವಿನ ವಿವೇಕಾನಂದ ಜೂನಿಯರ್ ಕಾಲೇಜು ಬಳಿ ನಡೆದಿದೆ.
ನಗರದ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರೇವತಿ ಅವರಿದ್ದ ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪ್ರಯಾಣಿಕರ ತಂಗುದಾಣಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ರೇವತಿ ಅವರಿಗೆ ಸಣ್ಣಪ್ರಮಾಣದ ಗಾಯವಾಗಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಪೊಲೀಸ್ ಜೀಪ್ ಜಖಂ ಗೊಂಡಿದ್ದು. ಬಸ್ ಪ್ರಯಾಣಿಕರ ತಂಗುದಾಣಕ್ಕೆ ಹಾನಿಯಾಗಿದೆ.
