LATEST NEWS
ಮಂಗಳೂರು – ಬಸ್ ಪಲ್ಟಿ 30ಕ್ಕೂ ಅಧಿಕ ಮಂದಿಗೆ ಗಾಯ

ಮಂಗಳೂರು ಎಪ್ರಿಲ್ 14: ಬಸ್ ನ ಸ್ಟೇರಿಂಗ್ ಕಟ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಘಟನೆ ನಗರ ಹೊರ ವಲಯದ ಗಂಜಿಮಠದ ಸಮೀಪದ ಸೂರಲ್ಪಡಿ ಬಳಿ ನಿನ್ನೆ ರಾತ್ರಿ ನಡೆದಿದೆ.
ಈ ಘಟನೆಯಲ್ಲಿ 30ಕ್ಕೂ ಅಧಿಕ ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೃಂಗೇರಿಯಿಂದ ಮಂಗಳೂರಿಗೆ ಬರುತ್ತಿದ್ದ ನಿಶ್ಮಿತಾ ಕಂಪನಿಯ ಬಸ್ಸು ಸ್ಟೇರಿಂಗ್ ರಾಡ್ ಕಟ್ಟಾಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿ ಮಗುಚಿ ಬಿದ್ದಿದೆ.
