KARNATAKA
ಕಾರಿನಲ್ಲಿ ರಿಯಲ್ ಎಸ್ಟೆಟ್ ಉದ್ಯಮಿ ಶವಪತ್ತೆ, ಕೊಲೆ ಮಾಡಿ ಕಾರಲ್ಲಿ ಶವ ಇಟ್ಟು ಹೋದ ದುಷ್ಕರ್ಮಿಗಳು..!

ಬೆಂಗಳೂರು : ಕಾರಿನಲ್ಲಿ ರಿಯಲ್ ಎಸ್ಟೆಟ್ ಉದ್ಯಮಿಯ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಬೆಂಗಳೂರಿನ ಬಾಗಲೂರು ಕ್ರಾಸ್ ಬಳಿ ರಿಯಲ್‌ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಎಂಬುವವರ ಶವಪತ್ತೆಯಾಗಿದೆ.
ಶವದ ಮೇಲೆ ಗಾಯದ ಗುರುತುಗಳಿದ್ದು ದುಷ್ಕರ್ಮಿಗಳು ಕೊಲೆ ಮಾಡಿ ಬಳಿಕ ಕಾರಿನಲ್ಲಿ ಶವ ಇಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉದ್ಯಮಿ ಕೃಷ್ಣ ಯಾದವ್ ನಿನ್ನೆ ರಾತ್ರಿಯಿಂದ ಕಾಣೆಯಾಗಿದ್ದರು. ಕೆಲಸಕ್ಕೆಂದು ಹೊರ ಹೋಗಿದ್ದವರು ರಾತ್ರಿ ಕಳೆದರೂ ಮನೆಗೆ ಹಿಂತಿರುಗಿರಲಿಲ್ಲ. ಇಂದು ಬೆಳಗ್ಗೆ ತನ್ನದೆ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಾರುತಿ ಶಿಫ್ಟ್ ಕಾರು ರಕ್ತ ಸಿಕ್ತವಾಗಿದೆ. ಹಂತಕರು ಕೊಲೆ ಮಾಡಿ ಬಾಗಲೂರು ಕ್ರಾಸ್ ಬಸ್ ನಿಲ್ದಾಣದ ಬಳಿ ಕಾರು ಬಿಟ್ಟು ಹೋಗಿದ್ದಾರೆ. ಸದ್ಯ ಪೊಲೀಸರು ಹಂತಕರ ತೀವ್ರ ಶೋಧ ಆರಂಭಿಸಿದ್ದಾರೆ.
