DAKSHINA KANNADA
ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ, ಹನಿಟ್ರ್ಯಾಪ್ ಕಿಂಗ್ ಪಿನ್ ಅಬ್ದುಲ್ ಸತ್ತಾರ್ ಸೇರಿ ಮತ್ತೆ ಮೂವರ ಬಂಧನ..!
ಮಂಗಳೂರು: ಮಾಜಿ ಶಾಸಕ ಮೊಯ್ದೀನ್ ಬಾವಾ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ಸಿಸಿಬಿ ಪೊಲೀಸರು ಪ್ರಕರಣದ ಕಿಂಗ್‌ಪಿನ್ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದ್ದು ಇದೀಗ ಬಂಧಿತರ ಒಟ್ಟು ಸಂಖ್ಯೆ 5 ಕ್ಕೇರಿದೆ. ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಬಂಧಿತ ಆರೋಪಿಗಳಾಗಿದ್ದಾರೆ. ಮುಮ್ತಾಜ್ ಅಲಿಯವರು ಕೂಳೂರು ಸೇತುವೆಯ ಬಳಿ ಕಾರನ್ನು ನಿಲ್ಲಿಸಿ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿದ್ದರು. ಆತ್ಮಹತ್ಯೆಗೂ ಮುನ್ನ ಕುಟುಂಬ ಸದಸ್ಯರಿಗೆ ವಾಯ್ಸ್ ನೋಟ್ ಕಳಿಸಿದ್ದು ಇದರಲ್ಲಿ ಲಕೆಲವರ ಹೆಸರುಗಳನ್ನು ಪ್ರಸ್ತಾಪಿಸಿದ್ದರು. ಈ ನಡುವೆ ಮುಮ್ತಾಜ್ ಅಲಿಯವರ ಸಹೋದರ ಬಿ.ಎಂ. ಹೈದರ್ ಅಲಿಯವರು ಆತ್ಮಹತ್ಯೆಯ ಹಿಂದೆ ಹಣಕ್ಕಾಗಿ ಬ್ಲ್ಯಾಕ್‌ಮೇಲ್, ಹನಿಟ್ರ್ಯಾಪ್ ಮಾಡಿರೋದೇ ಕಾರಣ ಎಂದು ಕಾವೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು.ಈ ಮಾಹಿತಿ ಮತ್ತು ಕುಟುಂಬದ ದೂರನ್ನು ಕೇಂದ್ರೀಕರಿಸಿ ಪೊಲೀಸರರು ತನಿಖೆ ಆರಂಭಿಸಿದ್ದರು. ಸದ್ಯ ಸಿಸಿಬಿ ಪೊಲೀಸರು ಪ್ರಕರಣದಲ್ಲಿ ಎ1 ಆರೋಪಿ ರೆಹಮತ್ ಮತ್ತು ಆಕೆಯ ಪತಿ ಶೋಯಬ್ ಎಂಬವರನ್ನು ಈಗಾಗಲೇ ಅರೆಸ್ಟ್ ಮಾಡಿದ್ದಾರೆ. ಇದೀಗ ಪ್ರಕರಣದ ಕಿಂಗ್ ಪಿನ್ ಅಬ್ದುಲ್ ಸತ್ತಾರ್ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ ಕಾವೂರು ಪೊಲೀಸರಿಗೆ ಹಸ್ತಾಂತರ ಮಾಡಿದ್ದಾರೆ.