Connect with us

    DAKSHINA KANNADA

    ಉದ್ಯಮಿ ರೊನಾಲ್ಡ್ ಕೊಲಾಸೊರಿಗೆ ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್…!

    ಮಂಗಳೂರು: ಉದ್ಯಮಿ, ಸಮಾಜ ಸೇವಕ ರೊನಾಲ್ಡ್ ಕುಲಾಸೊ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಲಭಿಸಿದೆ. ನಾಳೆ ಮಂಗಳೂರು ವಿವಿಯಲ್ಲಿ ನಡೆಯಲಿರುವ 42ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ್ವನಿತ ರಾಜ್ಯಪಾಲರಿಂದ ಈ ಗೌರವ ಡಾಕ್ಟರೇಟ್ ಪ್ರದಾನವಾಗಲಿದೆ.

    ಕೊಡುಗೈ ದಾನಿಯಾಗಿಯಾಗಿರುವ ರೊನಾಲ್ಡ್ ಕುಲಾಸೊ ಅವರು ಮೂಲತ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯವರು. 1975ರಲ್ಲಿ ಒಮಾನ್ ದೇಶದಲ್ಲಿ ಅಕೌಂಟೆಂಟ್ ಆಗಿ ವೃತ್ತಿ ಜೀವನ ಪ್ರಾರಂಭಿಸಿದ ಡಾ.ರೊನಾಲ್ಡ್ ಕೊಲಾಸೊ, ತಮ್ಮ ದಕ್ಷತೆ ಹಾಗೂ ನಿಷ್ಠಾವಂತ ದುಡಿಮೆಯಿಂದಾಗಿ ಗಲ್ಫ್ ನ ಎಂಟು ಹಾಗೂ ಯುರೋಪ್ ನ ಹಲವು ದೇಶಗಳಲ್ಲಿ ಅಕೌಂಟ್ಸ್ ಮುಖ್ಯಸ್ಥರಾಗಿ, ಆಡಳಿತ ವ್ಯವಸ್ಥಾಪಕರಾಗಿ, ಫೈನಾನ್ಸಿಯಲ್ ಕಂಟ್ರೋಲರ್ ಆಗಿ ಭಡ್ತಿ ಪಡೆಯುತ್ತಾ ಹೋದರು. ಗ್ರೀಸ್ ನ ಅಥೆನ್ಸ್ ನಲ್ಲಿರುವ ಸಿಸಿಐಸಿಎಲ್ , ಜರ್ಮನಿಯ ಮನ್ನೆಸ್ ಮನ್ ಹಾಗೂ ಮಿಲಾನೊದ ಸೈಪೇಮ್ ಎಂಬ ಮೂರು ಬೃಹತ್ ಬಹುರಾಷ್ಟ್ರೀಯ ಕಂಪೆನಿಗಳ ಒಕ್ಕೂಟದ ಕಮರ್ಷಿಯಲ್ ಸಿಇಒ ಆಗಿ ಆದರು. ಆ ಸಂದರ್ಭದಲ್ಲಿ ಡಾ. ಕೊಲಾಸೋ ಅವರ ವೃತ್ತಿಪರತೆಯನ್ನು ಗಮನಿಸಿ ಪ್ರಮುಖ ಪೆಟ್ರೋಲಿಯಮ್ ಹಾಗೂ ಗ್ಯಾಸ್ ಯೋಜನೆಗಳು, ಟೌನ್ ಶಿಪ್ ಗಳು ಮತ್ತು ವಿಮಾನ ನಿಲ್ದಾಣ ನಿರ್ಮಾಣದಂತಹ ಬೃಹತ್ ಯೋಜನೆಗಳ ಉಸ್ತುವಾರಿಯನ್ನು ಅವರಿಗೆ ವಹಿಸಲಾಯಿತು. ತನಗೆ ವಹಿಸಿದ ಪ್ರತಿಯೊಂದು ಹುದ್ದೆಯನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ ರೊನಾಲ್ಡ್ ಕೊಲಾಸೋ ಉದ್ಯಮ ರಂಗಕ್ಕೆ ಕಾಲಿಟ್ಟರು. ಉದ್ಯೋಗ, ಉದ್ಯಮ ಎರಡರಲ್ಲೂ ಅಸಾಮಾನ್ಯ ಯಶಸ್ಸು ಕಂಡ ರೊನಾಲ್ಡ್ ಕೊಲಾಸೋ ಅವರು ಸಮಾಜ ತನಗೆ ನೀಡಿದ ಹಾಗೆಯೇ ತಾನೂ ಸಮಾಜಕ್ಕೆ ನೀಡಬೇಕು ಎಂದು ಪಣತೊಟ್ಟು ಸೇವಾ ಚಟುವಟಿಕೆಗಳಿಗೆ ಧುಮುಕಿದರು. ಧರ್ಮ, ಜಾತಿ, ಭಾಷೆ, ಲಿಂಗ, ಪ್ರದೇಶಗಳ ಭೇದವಿಲ್ಲದೆ ಎಲ್ಲೆಲ್ಲಿ ಜನರಿಗೆ ಏನೇನು ಅಗತ್ಯವಿದೆಯೋ ಅದನ್ನು ಒದಗಿಸುತ್ತಾ ಹೋದರು. ಆ ಪೈಕಿ ಸಾರ್ವಜನಿಕರಿಗೆ ಪ್ರಯೋಜನವಾಗುವ ಮೂಲಭೂತ ಸೌಲಭ್ಯಗಳನ್ನು ನಿರ್ಮಿಸಿ ಕೊಡುವಲ್ಲಿ ಅವರು ಅಪಾರ ಕಾಳಜಿ ವಹಿಸಿದರು. ಅದೆಷ್ಟೋ ಜನರು, ಸಂಸ್ಥೆಗಳು, ಸಂಘಟನೆಗಳಿಗೆ ಕೊಲಾಸೋ ನೆರವು ನೀಡಿದ್ದಾರೆ. ಸರಕಾರಕ್ಕೆ ಹಲವಾರು ಕಚೇರಿ, ಕಟ್ಟಡಗಳನ್ನು ನಿರ್ಮಿಸಿ ಕೊಟ್ಟಿದ್ದಾರೆ. ಮಂದಿರ, ಮಸೀದಿ, ಚರ್ಚ್ ಗಳನ್ನೂ ಕಟ್ಟಿಸಿಕೊಟ್ಟಿದ್ದಾರೆ.ಕರ್ನಾಟಕ, ಗೋವಾ, ಮಹಾರಾಷ್ಟ್ರಗಳಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲೂ ಅವರ ಸೇವೆಯ ವ್ಯಾಪ್ತಿ ಹಬ್ಬಿದೆ.ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಮರ್ಕೆಂಟೈಲ್ ಲಾ (ವಾಣಿಜ್ಯ ಕಾನೂನು)ನಲ್ಲಿ ಪ್ರಥಮ ರಾಂಕ್ ಪಡೆದ ಪದವೀಧರ ಕೂಡ ಹೌದು. ಬಳಿಕ ಅವರು ಅಥೆನ್ಸ್ ನ ಇಂಟರ್ ನ್ಯಾಶನಲ್ ಕೋಸ್ಟ್ ಅಕೌಂಟೆಂಟ್ಸ್ ಮತ್ತು ಮ್ಯಾನೇಜ್ ಮೆಂಟ್ ಅಕೌಂಟೆಂಟ್ಸ್ (ಐಸಿಎಎಂಎ) ನಿಂದ ಕೋಸ್ಟ್ ಕಂಟ್ರೋಲ್ ಮತ್ತು ಕೋಸ್ಟ್ ಮಾನಿಟರಿಂಗ್ ನಲ್ಲಿ ಪದವಿ ಪಡೆದಿದ್ದಾರೆ. .

     

    Share Information
    Advertisement
    Click to comment

    You must be logged in to post a comment Login

    Leave a Reply