KARNATAKA
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿಎಸ್ ವೈ ಪುತ್ರ ಬಿ.ವೈ ವಿಜಯೇಂದ್ರ

ಬೆಂಗಳೂರು ನವೆಂಬರ್ 10: ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ.
ಸದ್ಯ ಇರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಜಾಗಕ್ಕೆ ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಬಿಜೆಪಿ ಹೈಕಮಾಂಡ ಬಿ ಎಸ್ ಯಡಿಯೂರಪ್ಪ ಅವರಿಗೆ ದೀಪಾವಳಿ ಉಡುಗೊರೆ ನೀಡಿದೆ.

ಮೊದಲ ಬಾರಿಗೆ ಶಾಸಕರಾಗಿರುವ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇಮಕಗೊಳಿಸಿದ ಆದೇಶ ಪ್ರಕಟಿಸಿದ್ದಾರೆ.