Connect with us

  KARNATAKA

  ಪುತ್ತಿಲ ಭೇಟಿಯಾಗಿದ್ದು ನಿಜ..ಬೆಷರತ್ ಆಗಿ ಬಿಜೆಪಿಗೆ ಸೇರ್ಪಡೆಯಾಗಿ ಎಂದಿದ್ದೇನೆ – ಬಿವೈ ವಿಜಯೇಂದ್ರ

  ಮೈಸೂರು, ಫೆಬ್ರವರಿ 22: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಿಜೆಪಿಗೆ ತಲೆ ನೋವಾಗಿರುವ ಹಿಂದೂ ಮುಖಂಡ ಪುತ್ತಿಲ ಪರಿವಾದ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಸ್ವತಃ ವಿಜಯೇಂದ್ರ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.


  ಮೈಸೂರಿನಲ್ಲಿ ಮಾತನಾಡಿದ ಅವರು, ಪುತ್ತಿಲ ನನ್ನನ್ನು ಭೇಟಿ ಮಾಡಿದ್ದು ಸತ್ಯ. ಬೆಷರತ್ ಆಗಿ ಬಿಜೆಪಿ ಸೇರ್ಪಡೆಯಾಗಿ ಎಂದು ಅವರಿಗೆ ಸೂಚಿಸಿದ್ದೇನೆ. ಯಾವುದೇ ಷರತ್ತುಗಳು ಬೇಡ. ಪ್ರಧಾನಿ ಮೋದಿ ನಾಯಕತ್ವಕ್ಕಾಗಿ ಎಲ್ಲರೂ ಒಂದಾಗಬೇಕು ಎಂದು ಹೇಳಿದ್ದೇನೆ ಎಂದು ತಿಳಿಸಿದ್ದಾರೆ. ಪುತ್ತಿಲ ವಿಚಾರವಾಗಿ ದಕ್ಷಿಣ ಕನ್ನಡದ ಸ್ಥಳೀಯ ಮುಖಂಡರ ಜೊತೆ ಚರ್ಚೆ ಮಾಡುತ್ತೇನೆ. ಎಲ್ಲಾ ಕ್ಷೇತ್ರಕ್ಕೂ ನಮಗೆ ಬಿಜೆಪಿ, ಕಮಲ ಚಿಹ್ನೆಯಷ್ಟೇ ಅಭ್ಯರ್ಥಿ. ಬೇರೆ ಯಾವ ಭಿನ್ನಾಭಿಪ್ರಾಯಗಳೂ ನಮ್ಮ ನಡುವೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

  ಪುತ್ತಿಲ ಪರಿವಾರವನ್ನು ಬಿಜೆಪಿ ಜತೆ ವಿಲೀನಗೊಳಿಸಿ ಪಕ್ಷ ಸೇರ್ಪಡೆಯಾಗುವುದಾದರೆ ಸ್ವಾಗತ ಎಂದು ಬಿಜೆಪಿ ನಾಯಕರು ಹೇಳಿದ್ದರು. ಇದರ ಬೆನ್ನಲ್ಲೇ ಪುತ್ತೂರಿನಲ್ಲಿ ಪರಿವಾರದ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಸಿದ್ದ ಪುತ್ತಿಲ, ಲೋಕಸಭಾ ಚುನಾವಣೆಗೂ ಮುನ್ನ ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷ ಸ್ಥಾನ ನೀಡಿದರೆ ಮಾತ್ರ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಹೇಳಿದ್ದರು. ಅಲ್ಲದೆ, ಈ ವಿಚಾರವಾಗಿ 3 ದಿನಗಳ ಒಳಗಾಗಿ ನಿರ್ಧಾರ ತಿಳಿಸಬೇಕು ಎಂದೂ ಬಿಜೆಪಿಗೆ ಗಡುವು ನೀಡಿದ್ದರು. ಇದಾಗಿ ಹಲವು ದಿನಗಳೂ ಕಳೆದೂ ಈ ವಿಚಾರವಾಗಿ ಯಾವುದೇ ಬೆಳವಣಿಗೆ ಆಗಿಲ್ಲ ಎಂಬುದು ಗಮನಾರ್ಹ. ಇದೀಗ ಪುತ್ತಿಲ ಮಾತುಕತೆ ನಡೆಸಿರುವ ಬಗ್ಗೆ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply