DAKSHINA KANNADA
ರಾಜ್ಯದ ಆಯೋಗ್ಯ ಸರಕಾರ ಮನುಷ್ಯತ್ವವನ್ನೇ ಕಳೆದುಕೊಂಡಿದೆ – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಸುಳ್ಯ ಮೇ 17: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಪ್ರಕರಣ NIA ತನಿಖೆಗೆ ನೀಡುವಂತೆ ರಾಜ್ಯ ಸರಕಾರಕ್ಕೆ ಈಗಾಗಲೇ ಹಲವು ಬಾರಿ ಮನವಿ ಮಾಡಲಾಗಿದೆ ಆದರೆ ರಾಜ್ಯದ ಆಯೋಗ್ಯ ಸರಕಾರ ಮನುಷ್ಯತ್ವವನ್ನೇ ಕಳೆದುಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಆರೋಪಿಸಿದ್ದಾರೆ.
ಸುಳ್ಯದಲ್ಲಿ ಮಾತನಾಡಿದ ಅವರು ಸುಹಾಸ್ ಅಂತ್ತಕ್ರೀಯೆಯಲ್ಲೂ ನಾನು ಭಾಗವಹಿಸಿದ್ದೇನೆ. ಪ್ರಕರಣವನ್ನು ಉನ್ನತ ಮಟ್ಟದ ತನಿಖೆ, NIA ಗೆ ಕೊಡಬೇಕೆಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ಸುಹಾಸ್ ತಾಯಿ ಸೇರಿದಂತೆ ಎಲ್ಲರೂ ಆ ಸಂದರ್ಭದಲ್ಲಿ ಭಾಗಿಯಾಗಿದ್ದರು. ಅಲ್ಲದೆ ರಾಜ್ಯಪಾಲರು ಸರಕಾರಕ್ಕೆ ಈ ಬಗ್ಗೆ ಸೂಚನೆ ನೀಡಬೇಕೆಂದು ಮನವಿ ಮಾಡಿದ್ದೇವೆ, ನಮ್ಮ ಮನವಿಗೆ ರಾಜ್ಯಪಾಲರು ನಮ್ಮ ಮನವಿಗೆ ಸರರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಆದರೆ ಸಿದ್ಧರಾಮಯ್ಯ ನೇತೃತ್ವದ ಭಂಢ ಸರಕಾರ ಇನ್ನೂ ತೀರ್ಮಾನ ಕೈಗೊಂಡಿಲ್ಲ, ಬಿಜೆಪಿ ನಿರಂತರವಾಗಿ ಈ ವಿಚಾರವನ್ನು ಒತ್ತಾಯಿಸಲಿದೆ. ಸುಹಾಸ್ ಮನೆಗೆ ಭೇಟಿ ನೀಡದ ಗೃಹಸಚಿವರ ನಡೆ ನೋವಿನ ಸಂಗತಿಯಾಗಿದೆ. ಭೇಟಿ ನೀಡಲು ಗೃಹಸಚಿವರು ತಯಾರಾದ ಸಂದರ್ಭದಲ್ಲಿ ಒಂದು ಕೋಮಿನ ಮುಖಂಡರು ಅವರನ್ನು ಭೇಟಿ ಮಾಡುತ್ತಾರೆ. ಅವರ ಒತ್ತಡಕ್ಕೆ ಮಣಿದು ಗೃಹಸಚಿವರು ಸುಹಾಸ್ ಮನೆಗೆ ಭೇಟಿ ಕಾರ್ಯಕ್ರಮ ರದ್ದು ಮಾಡುತ್ತಾರೆ. ಕನಿಷ್ಟ ಸಾಂತ್ವಾನವನ್ನೂ ಗೃಹಸಚಿವರು ನೀಡಿಲ್ಲ ಇದು ರಾಜ್ಯದ ದುರಂತ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಳ್ಯ ತಾಲೂಕಿನ ಕೋರಂಬಡ್ಕದಲ್ಲಿ ನಡೆದ ಕೊರಗಜ್ಜ ದೈವದ ವಿಶೇಷ ಹರಕೆ ನೇಮೋತ್ಸವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾಗಿಯಾದರು. ಸುಳ್ಯ ಜಯನಗರದ ಶ್ರೀನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ಶ್ರೀಗುಳಿಗ ದೈವ ಹಾಗೂ ಕೊರಗಜ್ಜ ದೈವಸ್ಥಾನದಲ್ಲಿ ವಿಶೇಷ ಹರಕೆಯ ಶ್ರೀಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳ ತಂಬಿಲ ಸೇವೆ ಕಾರ್ಯಕ್ರಮ ನಡೆಯಿತು. ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗುವಂತೆ ಸಂಕಲ್ಪ ಮಾಡಿ ಬಿಜೆಪಿ ಜಯನಗರ ಬೂತ್ ಸಮಿತಿ ಹರಕೆ ಹೇಳಿತ್ತು. ಇದೀಗ ಬಿಜೆಪಿ ವತಿಯಿಂದ ಹರಕೆ ನೇಮೋತ್ಸವ ನಡೆದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.
ಈ ವೇಳೆ ಸಂಸದ ಬ್ರಿಜೇಶ್ ಚೌಟ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇರಿ ಹಲವು ಮಂದಿ ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಸುಳ್ಯ ಬಿಜೆಪಿ ಘಟಕ ಸಂಸದ ಬ್ರಿಜೇಶ್ ಚೌಟ ಮೂಲಕ ಕೊರಗಜ್ಜ ದೈವದ ಪ್ರಸಾದವನ್ನು ಪ್ರಧಾನಿ ನರೇಂದ್ರ ಮೋದಿಗೆ ತಲುಪಿಸಲಿದೆ.