LATEST NEWS
ಬೈಂದೂರಿನಲ್ಲಿ ಅಮಾನವೀಯ ಘಟನೆ – ಸತ್ತ ದನವನ್ನು ರಸ್ತೆಯಲ್ಲೇ ಎಳೆದೊಯ್ದ ಐಆರ್ ಬಿ ಸಿಬ್ಬಂದಿ…!!

ಬೈಂದೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತದಲ್ಲಿ ಸತ್ತು ಹೋಗಿದ್ದ ದನವೊಂದನ್ನು ಐಆರ್ ಬಿ ಸಂಸ್ಥೆಯ ಸಿಬ್ಬಂದಿಗಳು ವಾಹನಕ್ಕೆ ಕಟ್ಟಿ ರಸ್ತೆ ಮೇಲೆ ಎಳೆದೊಯ್ಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಾಹನಕ್ಕೆ ಡಿಕ್ಕಿಯಾಗಿ ಎರಡು ಹಸುಗಳು ಸತ್ತು ಬಿದ್ದಿದ್ದು, ವಾಹನಕ್ಕೆ ಹಾಕಿ ಹಸುವಿನ ಶವ ಸಾಗಿಸುವ ಬದಲು ಹಸುವನ್ನ ವಾಹನಕ್ಕೆ ಕಟ್ಟಿ ಎಳೆದೊಯ್ದು ಅವಾಂತರ ಮಾಡುವ ಮೂಲಕ ಐಆರ್ ಬಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಸತ್ತ ಹಸುಗಳನ್ನು ಟೊಯಿಂಗ್ ವಾಹನದ ಮೂಲಕ ಎಳೆದೊಯ್ಯುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಬೈಂದೂರು ಹಿಂದೂ ಜಾಗರಣ ವೇದಿಕೆ ಐಆರ್‌ಬಿ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಹಸುಗಳನ್ನು ಈ ರೀತಿಯಾಗಿ ಬಿದಿಬೀದಿಗಳಲ್ಲಿ ಎಳೆದುಕೊಂಡು ಹೋಗುವ ಹೇಯ ಕೃತ್ಯಕ್ಕೆ ನಾಚಿಕೆಯಾಗಬೇಕು. ನಿಮಗೆ ಗೋವಿನ ಶಾಪ ತಟ್ಟದೆ ಇರುವುದಿಲ್ಲ ಎಂದಿದೆ. ನಿಮ್ಮ ಬೇಜಾವಾಬ್ದಾರಿತನದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಇದರ ವಿರುದ್ದ ಹಿಂದೂ ಸಂಘಟನೆ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದೆ.
