Connect with us

LATEST NEWS

ಬೈಂದೂರಿನಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ಉಡುಪಿ, ಮಾರ್ಚ್ 16 : ಜಿಲ್ಲಾ ಲೋಕಾಯುಕ್ತ ಪೊಲೀಸ್ ವಿಭಾಗದ ವತಿಯಿಂದ ಮಂಗಳವಾರ ಬೈಂದೂರು ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ಅಹವಾಲು ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದಲ್ಲಿ ಪೊಲೀಸ್ ಉಪಾಧೀಕ್ಷಕ ಕೆ. ಸಿ. ಪ್ರಕಾಶ್, ಪೊಲೀಸ್ ನಿರೀಕ್ಷಕ ರಫೀಕ್ ಎಂ., ಬೈಂದೂರು ತಾಲೂಕು ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ, ಭೂ ಮಾಪಕಿ ಶೈಲಜಾ, ಶಿರೂರು ಗ್ರಾಮ ಪಂಚಾಯತ್ ಪಿ.ಡಿ.ಓ ರಾಜೇಂದ್ರ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಾರ್ವಜನಿಕರಿಂದ ಒಟ್ಟು 3 ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ 1 ಅರ್ಜಿಯನ್ನು ಸ್ಥಳದಲ್ಲಿ ಇತ್ಯರ್ಥಪಡಿಸಿ, 2 ಅರ್ಜಿಗಳಲ್ಲಿ ಪ್ರಪತ್ರ 1 ಮತ್ತು 2 ನ್ನು ನೀಡಿದ್ದು, ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಯಿತು.

Advertisement
Click to comment

You must be logged in to post a comment Login

Leave a Reply