LATEST NEWS
ಮಂಗಳೂರು ನಗರ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ಡಿಸೆಂಬರ್ 20 ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ
ಮಂಗಳೂರು ನಗರ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ಡಿಸೆಂಬರ್ 20 ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ
ಮಂಗಳೂರು ಡಿಸೆಂಬರ್ 19: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಉಗ್ರಸ್ವರೂಪ ಪಡೆದಿದ್ದು, ಗಲಾಟೆ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಮಂಗಳೂರು ಉತ್ತರ, ದಕ್ಷಿಣ, ಪೂರ್ವ, ಬರ್ಕೆ ಮತ್ತು ಉರ್ವ ಠಾಣೆ ವ್ಯಾಪ್ತಿಯಲ್ಲಿ 20 ರಂದು ಮಧ್ಯರಾತ್ರಿವರೆಗೆ ಕರ್ಫ್ಯೂ ವಿಧಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಈ ಹಿನ್ನಲೆಯಲ್ಲಿ ನಾಳೆ ಡಿಸೆಂಬರ್ 20 ರಂದ ಮಂಗಳೂರು ನಗರ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಿಂದೂ ಬಿ ರೂಪೇಶ್ ಆದೇಶಿಸಿದ್ದಾರೆ.