Connect with us

    LATEST NEWS

    ಸಿ.ಎ.ಎ ಕಾಯ್ದೆ ವಿರೋಧಿಸಿ ಇಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ – ಅರೆ ಸೇನಾಪಡೆ ನಿಯೋಜನೆ

    ಸಿ.ಎ.ಎ ಕಾಯ್ದೆ ವಿರೋಧಿಸಿ ಇಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ – ಅರೆ ಸೇನಾಪಡೆ ನಿಯೋಜನೆ

    ಮಂಗಳೂರು ಜನವರಿ 15:ದೇಶದಾದ್ಯಂತ ನಡೆಯುತ್ತಿರುವ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆಯ ಈಗ ಕರಾವಳಿಯಲ್ಲಿ ಕಾಣಿಸಿಕೊಂಡಿದೆ. ಕಳೆದ ಡಿಸೆಂಬರ್ 19ರ ಹಿಂಸಾಚಾರ, ಗೋಲಿಬಾರ್, ಕರ್ಫ್ಯೂಯಿಂದ ಕಂಗೆಟ್ಟಿದ್ದ ಮಂಗಳೂರು ಈಗ ಮತ್ತೊಂದು ಸುತ್ತಿನ ಪ್ರತಿಭಟನೆಗೆ ಸಿದ್ದಗೊಂಡಿದೆ.

    ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ವಿರೋಧಿಸಿ ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವ ಹಾಗೂ ಸಮಾನ ಮನಸ್ಕ ಸಂಘಟನೆಗಳ ಸಹಯೋಗದಲ್ಲಿ ಇಂದು ಮಧ್ಯಾಹ್ನ 2.30ಕ್ಕೆ ಅಡ್ಯಾರ್ ಶಹಾ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ಹಿನ್ನೆಲೆಯಲ್ಲಿ ಮಂಗಳೂರಿನಾದ್ಯಂತ ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

    ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಭದ್ರಯಾ ಉಸ್ತುವರಿ ಜವಾಬ್ದಾರಿ ವಹಿಸಿಕೊಂಡಿದ್ದು ಸಮಾವೇಶ ನಡೆಯುವ ಮೈದಾನದ ಭಧ್ರತೆಯನ್ನು ಪರಿಶೀಲಿಸಿದ್ದಾರೆ.

    ಮೈದಾನದ ಪಾರ್ಕಿಂಗ್, ವೇದಿಕೆ, ಭಧ್ರತೆ ಬಗ್ಗೆ ಮಂಗಳೂರು ಕಮೀಷನರ್ ಪಿ ಎಸ್ ಹರ್ಷರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಕೇಂದ್ರ ಅರೆಸೇನಾ ಪಡೆಗಳನ್ನು ಕರೆಸಿಕೊಳ್ಳಲಾಗಿದೆ. ಲಕ್ಷಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆ ಇರುವುದರಿಂದ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೆ, ನಗರದಾದ್ಯಂತ ಬಿಗಿ ಬಂದೋಬಸ್ತನ್ನು ಮಾಡಲಾಗಿದೆ. ಈಗಾಗಲೇ ಕೆಎಸ್ ಆರ್ ಪಿ, ಸಿಎಆರ್, ಆರ್ ಎಎಫ್ ತುಕಡಿಗಳನ್ನು ಕರೆಸಲಾಗಿದ್ದು 3800 ಪೊಲೀಸರು ಬೀಡುಬಿಟ್ಟಿದ್ದಾರೆ. ಇದಲ್ಲದೆ, ಆಸುಪಾಸಿನ ಜಿಲ್ಲೆಗಳಿಂದಲೂ ಹೆಚ್ಚುವರಿ ಪೊಲೀಸರನ್ನು ಕರೆಸಲಾಗಿದೆ.

    ಪ್ರತಿಭಟನಾ ಸಮಾವೇಶದ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ 9ರಿಂದ ರಾತ್ರಿ 9ರವರೆಗೆ ಬಿ.ಸಿ.ರೋಡ್- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಮಾರ್ಪಾಡುಗೊಳಿಸಿ ಪೊಲೀಸ್ ಆಯುಕ್ತ ಡಾ.ಹರ್ಷ ಪಿ.ಎಸ್. ಆದೇಶ ಹೊರಡಿಸಿದ್ದಾರೆ.
    ಉಡುಪಿ ಕಡೆಯಿಂದ ಬೆಂಗಳೂರು ಕಡೆಗೆ ಸಾಗುವ ವಾಹನಗಳು ಪಡುಬಿದ್ರಿಯಲ್ಲಿ ತಿರುವು ಪಡೆದು ಕಾರ್ಕಳ-ಧರ್ಮಸ್ಥಳ ಮೂಲಕ ಶಿರಾಡಿ ಘಾಟಿಯಲ್ಲಿ ಪ್ರಯಾಣಿಸಬೇಕು.

    ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುವ ವಾಹನಗಳು ಮೆಲ್ಕಾರ್, ಕೊಣಾಜೆ, ತೊಕ್ಕೊಟ್ಟು, ಪಂಪ್‌ವೆಲ್ ಮೂಲಕ ಮಂಗಳೂರು ಪ್ರವೇಶಿಸಬೇಕು. ಮಂಗಳೂರಿನಿಂದ ಬೆಂಗಳೂರು ಕಡೆಗೆ ಪ್ರಯಾಣಿಸುವ ವಾಹನಗಳು ನಂತೂರಿನಲ್ಲಿ ತಿರುವು ಪಡೆದು ಪಂಪ್‌ವೆಲ್-ತೊಕ್ಕೊಟ್ಟು-ಕೊಣಾಜೆ-ಬಿ.ಸಿ ರೋಡ್ ಮೂಲಕ ಸಾಗಬೇಕು. ಬಿ.ಸಿ.ರೋಡ್‌ನಿಂದ ಮಂಗಳೂರಿಗೆ ಬರುವ ವಾಹನಗಳು ಪೊಳಲಿ- ಕೈಕಂಬ ಮೂಲಕ ಪ್ರಯಾಣಿಸಬೇಕು.

    Share Information
    Advertisement
    Click to comment

    You must be logged in to post a comment Login

    Leave a Reply