Connect with us

LATEST NEWS

ಕಫೆ ಕಾಫಿ ಡೇ ನಿರ್ದೇಶಕ ಕಾಫಿ ಕಿಂಗ್ ಸಿದ್ಧಾರ್ಥ್ ಮೃತ ದೇಹ ಪತ್ತೆ

ಕಫೆ ಕಾಫಿ ಡೇ ನಿರ್ದೇಶಕ ಕಾಫಿ ಕಿಂಗ್ ಸಿದ್ಧಾರ್ಥ್ ಮೃತ ದೇಹ ಪತ್ತೆ

ಮಂಗಳೂರು ಜುಲೈ 31: ಮಂಗಳೂರು ನೇತ್ರಾವತಿ ನದಿಯಿಂದ ನಿಗೂಢ ನಾಪತ್ತೆಯಾಗಿರುವ ಕೆಫೆ ಕಾಫಿ ಡೇ ಓನರ್ ಸಿದ್ಧಾರ್ಥ್ ಅವರ ಮೃತದೇಹ ಇಂದು ಪತ್ತೆಯಾಗಿದೆ.

ಸೋಮವಾರ ತಡರಾತ್ರಿಯಿಂದ ಮಂಗಳವಾರ ತಡರಾತ್ರಿವರೆಗೆ ನೇತ್ರಾವತಿ ನದಿ ತಟದಲ್ಲಿ ಶೋಧ ಕಾರ್ಯ ನಡೆಸಲಾಗಿದ್ದು, ನಿನ್ನೆ ರಾತ್ರಿ ಹಿನ್ನಲೆಯಲ್ಲಿ ಶೋಧ ಕಾರ್ಯಾಚರಣೆ ನಿಲ್ಲಿಸಲಾಗಿತ್ತು. ಇಂದು ಬೆಳಗ್ಗೆ ಮತ್ತೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಈ ಮಧ್ಯೆ ಹೊಯಿಗೆ ಬಜಾರ್ ಎಂಬ ಪ್ರದೇಶದ ನೇತ್ರಾವತಿ ನದಿ ಹಿನ್ನಿರಿನಲ್ಲಿ ಮೃತದೇಹ ಪತ್ತೆಯಾಗಿದೆ.

ಸ್ಥಳೀಯ ಮೀನುಗಾರರು ಗಮನಿಸಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಒಟ್ಟಿನಲ್ಲಿ 36 ಗಂಟೆಗಳ ನಿರಂತರ ಕಾರ್ಯಾಚರಣೆಯ ಬಳಿಕ ಇದೀಗ ಸಿದ್ಧಾರ್ಥ್ ಪತ್ತೆಯಾಗಿದ್ದಾರೆ.

ಮಂಗಳಾದೇವಿ ದೇವಸ್ಥಾನದ ಹಿಂಭಾಗದಲ್ಲಿ ರಸ್ತೆಯಿದೆ. ಆ ರಸ್ತೆಯಲ್ಲಿ ಹೊಯಿಗೆ ಬಜಾರ್ ಎಂಬ ಪ್ರದೇಶವಿದೆ. ಇಲ್ಲಿ ನದಿ ಒಂದು ಕಡೆಯಿಂದ ಮಂಗಳೂರು ಬಂದರನ್ನು ತಲುಪುತ್ತದೆ. ಇನ್ನೊಂದು ಕಡೆಯಿಂದ ಸಮುದ್ರವನ್ನು ತಲುಪುತ್ತದೆ. ಈ ಪ್ರದೇಶದಲ್ಲಿ ಸಿದ್ಧಾರ್ಥ್ ಮೃತದೇಹ ಸಿಕ್ಕಿದೆ.

ಸಿದ್ದಾರ್ಥ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ತರಲಾಗಿದೆ.

Facebook Comments

comments