LATEST NEWS
ಕ್ಯಾಲಿಪೋರ್ನಿಯಾ ಕಿಡ್ನಾಪ್ – 8 ತಿಂಗಳ ಮಗು ಸೇರಿದಂತೆ ನಾಲ್ವರ ಶವ ಪತ್ತೆ
ವಾಷಿಂಗ್ಟನ್: ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ಅಪಹರಣಕ್ಕೊಳಗಾಗಿದ್ದ ಭಾರತೀಯ ಮೂಲದ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ.
8 ತಿಂಗಳ ಮಗು ಅರೂಹಿ ಧೇರಿ ಮತ್ತು ಪೋಷಕರಾದ ಜಸ್ಲೀನ್ ಕೌರ್ (27), ಜಸ್ದೀಪ್ ಸಿಂಗ್ (36) ಹಾಗೂ ಚಿಕ್ಕಪ್ಪ ಅಮನದೀಪ್ ಸಿಂಗ್ (39) ಅವರನ್ನು ಕೆಲ ದಿನಗಳ ಹಿಂದೆ ಅಪಹರಿಸಲಾಗಿತ್ತು. ಈಗ ಹಣ್ಣಿನ ತೋಟವೊಂದರಲ್ಲಿ ನಾಲ್ವರ ಮೃತದೇಹ ಪತ್ತೆಯಾಗಿದೆ.
ನಾಲ್ವರ ಶವಗಳು ಇಂಡಿಯಾನಾ ರಸ್ತೆ ಮತ್ತು ಹಚಿನ್ಸನ್ ರಸ್ತೆ ಬಳಿಯ ಹಣ್ಣಿನ ತೋಟದಲ್ಲಿ ಬುಧವಾರ ಸಂಜೆ ಪತ್ತೆಯಾಗಿವೆ. ತೋಟದ ರೈತ ಶವಗಳನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
You must be logged in to post a comment Login